ತಗಡೂರು ಗ್ರಾಪಂಗೆ ಆಯ್ಕೆ
ನುಗ್ಗೇಹಳ್ಳಿ: ಇಲ್ಲಿಗೆ ಸಮೀಪದ ತಗಡೂರು ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಎಲ್.ಡಿ ಪುಟ್ಟರಾಜು ಗುರುವಾರ ಅಧಿಕಾರ ವಹಿಸಿಕೊಂಡರು. ಅವರನ್ನು ತಾಪಂ ಸದಸ್ಯ ಬಸವರಾಜು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಮ್ಮಯ್ಯ ಮತ್ತಿತರರು ಅಭಿನಂದಿಸಿದರು. ಈ ಹಿಂದಿನ ಅಧ್ಯಕ್ಷೆ ಸುನಂದಾ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೂ ಉಪಾಧ್ಯಕ್ಷ ಎಲ್.ಡಿ ಪುಟ್ಟರಾಜು ಅವರನ್ನೇ ಪ್ರಭಾರ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ವಸತಿ ಶಾಲೆಯ ಪ್ರೀತಿ ಸಾಧನೆ
ಅರಸೀಕೆರೆ: ತಾಲೂಕಿನ ಬಾಣಾವರ ಹೋಬಳಿ ಬಸವನಹಳ್ಳಿ ಸಮೀಪವಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಎಂ.ಎಸ್. ಪ್ರೀತಿ ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾಳೆ.
ಕಳೆದ 12ರಂದು ಪ್ರಕಟಗೊಂಡ ಫಲಿತಾಂಶದಲ್ಲಿ ಶಾಲೆ ಶೇ.100ರಷ್ಟು ಫಲಿತಾಂಶ ಪಡೆದಿದೆ. ಮಾತ್ರವಲ್ಲ, ಶಾಲೆಯ ವಿದ್ಯಾರ್ಥಿನಿ ಪ್ರೀತಿ ಎಂ.ಎಸ್. ಕನ್ನಡ ಭಾಷೆಯಲ್ಲಿ 122, ಇಂಗ್ಲಿಷ್ 96, ಹಿಂದಿ 88, ವಿಜ್ಞಾನ 65, ಸಮಾಜ ವಿಜ್ಞಾನ 95 ಹಾಗೂ ಗಣಿತದಲ್ಲಿ 73 ಅಂಕ ಪಡೆದಿದ್ದು ಒಟ್ಟಾರೆ 539 ಅಂಕ ಗಳಿಸಿ ಶೇ.86.24 ಫಲಿತಾಂಶ ಪಡೆದಿದ್ದಾರೆ ಎಂದು ಪ್ರಾಂಶುಪಾಲ ಜಯಪ್ರಕಾಶ್ ತಿಳಿಸಿದ್ದಾರೆ. ಡಿ.ಎಂ.ಕುರ್ಕೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶೇ. 97.01 ಫಲಿತಾಂಶ ಲಭ್ಯವಾಗಿದ್ದು, 67 ವಿದ್ಯಾರ್ಥಿಗಳಲ್ಲಿ 65 ಮಂದಿ ಉತ್ತೀರ್ಣರಾಗಿದ್ದಾರೆ. 3 ಉನ್ನತ ಶ್ರೇಣಿ, 28 ಪ್ರಥಮ, 18 ದ್ವಿತೀಯ, 16 ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದ 24 ಮಂದಿಯಲ್ಲಿ 24 ಮಂದಿಯೂ ತೇರ್ಗಡೆಯಾಗುವ ಮೂಲಕ 100ಕ್ಕೆ 100ರಷ್ಟು ಫಲಿತಾಂಶ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

