ಹಾಸನ

ವ್ಯವಸ್ಥಿತ ಮಾಧ್ಯಮ ಕೇಂದ್ರ

Published On :

ಹಾಸನ: ಈ ಬಾರಿ ಲೋಕಸಭಾ ಚುನಾವಣೆ ಮತ ಎಣಿಕೆ ಮಾಹಿತಿ  ಸುಲಭವಾಗಿ ದೊರೆಯುವಂತೆ ಸುಸಜ್ಜಿತ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ.  ಎರಡು ಪ್ರತ್ಯೇಕ ಟಿವಿಗಳಲ್ಲಿ ರಾಜ್ಯ, ರಾಷ್ಟ್ರದ ಚುನಾವಣಾ ಫಲಿತಾಂಶ ನೋಡಲು ಅನುಕೂಲವಿದ್ದು, ಹಾಸನ ಲೋಕಸಭಾ ಕ್ಷೇತ್ರದ ಕ್ಷಣ ಕ್ಷಣದ ಮಾಹಿತಿಯೂ ಕ್ಷಣ ಕ್ಷಣವೂ ದೊರೆಯಲಿದೆ. ಎನ್‌ಐಸಿ ಸಾಫ್ಟ್‌ವೇರ್ ಬಳಸಿ ಮತ ಎಣಿಕೆ ಮಾಹಿತಿ ಅಳವಡಿಸಲಾಗುವುದು.
ವಿಡಿಯೋ ಕಾನ್ಫರೆನ್ಸ್: ಮತ ಎಣಿಕೆಗೆ ಪೂರಕವಾಗಿ ಚುನಾವಣಾ ಆಯೋಗ ವಿಡಿಯೋ ಕಾನ್ಫರೆನ್ಸ್ ಮೂಲಕ ಮತ ಎಣಿಕೆ ಸಂದರ್ಭ ಅನುಸರಿಸಬೇಕಾದ ಕ್ರಮಗಳು, ಆಯೋಗಕ್ಕೆ ನಿರ್ದಿಷ್ಟ ನಮೂನೆಯಲ್ಲಿ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿತು. ದೂರುಗಳಿಗೆ ಎಡೆಮಾಡಿಕೊಡದಂತೆ ಎಚ್ಚರಿಕೆಯಿಂದ ಅಚ್ಚುಕಟ್ಟಾಗಿ ಮತ ಎಣಿಕೆ ನಡೆಸುವಂತೆ ಸೂಚಿಸಲಾಗಿದೆ.


ಸೆಕ್ಷನ್ 144 ಅಡಿ ನಿಷೇಧಾಜ್ಞೆ
ಹಾಸನ: ಲೋಕಸಭಾ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 16 ಬೆಳಗ್ಗೆ 6 ರಿಂದ 17 ಬೆಳಗ್ಗೆ 6 ರವರೆಗೆ ಹಾಸನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ 200 ಮೀಟರ್ ವ್ಯಾಪ್ತಿ ಪ್ರದೇಶ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಿ  ಜಿಲ್ಲಾ ದಂಡಾಧಿಕಾರಿ ವಿ.ಅನ್ಬುಕುಮಾರ್ ಆದೇಶ ನೀಡಿದ್ದಾರೆ. ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು ಮತ್ತು ಮಾರಕಾಸ್ತ್ರಗಳೊಂದಿಗೆ ಓಡಾಡುವುದನ್ನು ನಿಷೇಧಿಸಿದೆ. ಮತ ಎಣಿಕೆ ಸಿಬ್ಬಂದಿ ವರ್ಗ ಮತ್ತು ಸಂಬಂಧಿಸಿದ ಅಧಿಕಾರಿಗಳನ್ನು ಹೊರತುಪಡಿಸಿ, ಮತ ಎಣಿಕೆ ಕೇಂದ್ರಕ್ಕೆ ಉಳಿದ ಎಲ್ಲಾ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ. ಮತ ಎಣಿಕೆ ಪ್ರದೇಶ ವ್ಯಾಪ್ತಿಯಲ್ಲಿ 200 ಮೀಟರ್ ಸುತ್ತ-ಮುತ್ತಲ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿದೆ. ಮೇಲ್ಕಂಡ ಸಮಯದಲ್ಲಿ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ  ಬ್ಯಾನರ್ ಪ್ರದರ್ಶಿಸುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ ಆಚರಿಸುವುದು, ಘೋಷಣೆ ಕೂಗುವುದು ಮತ್ತು ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.  ನಿಷೇಧಾಜ್ಞೆಯು ಧಾರ್ಮಿಕ ಆಚರಣೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಅಧಿಕಾರಿಗಳಿಗೆ ತರಬೇತಿ
ಮತ ಎಣಿಕೆ  ಬಗ್ಗೆ ಜಿಲ್ಲಾಡಳಿತ ವತಿಯಿಂದ ಚುನಾವಣಾ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಅಧಿಕಾರಿಗಳು ಯಾವ ರೀತಿ ಮತ ಎಣಿಕೆ ಪ್ರಕ್ರಿಯೆ ನಡೆಸಬೇಕು ಮತ್ತು ಮತಯಂತ್ರಗಳ ಸೀಲ್ ಹೇಗೆ ತೆರೆಯಬೇಕು ಎಂಬುದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.