ಪುಣ್ಯಭೂಮಿಸಂಸ್ಥೆಗೆ 'ಸಾಧಕ ಕೃಷಿ ಸಂಸ್ಥೆ' ಪ್ರಶಸ್ತಿ
ಹಾಸನ: ಜೈವಿಕ ಕೃಷಿ ಕುರಿತು ಪ್ರಯೋಗಗಳನ್ನು ಕೈಗೊಂಡು ಜನಪ್ರಿಯಗೊಳಿಸುವಲ್ಲಿ ಕಾರ್ಯ ಮಾಡುತ್ತಿರುವ ಆಲೂರು ಬಳಿಯ ಪುಣ್ಯಭೂಮಿ ಸಂಸ್ಥೆಗೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಮಠದೇವಳದ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ವತಿಯಿಂದ ಇತ್ತೀಚೆಗೆ ನಡೆದ ಕೃಷಿ ಜಯಂತಿ-2014 ಸಮಾರಂಭದಲ್ಲಿ ಕೃಷಿ ಸಾಧಕ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಸಂಸದ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರಹೆಗಡೆ ಕಾಗೇರಿ ಮತ್ತಿತರರು ಭಾಗವಹಿಸಿದ್ದರು. ಪುಣ್ಯಭೂಮಿ ಗೌರವಾಧ್ಯಕ್ಷ ಜಿ.ಎಸ್.ಗಿಡ್ಡೇಗೌಡ ಸಂಸ್ಥೆ ಪ್ರತಿನಿಧಿಸಿ ಪ್ರಶಸ್ತಿ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

