ಆಲೂರು ತಾಲೂಕು ಬಿಜೆಪಿ ಘಟಕ ವಿಜಯೋತ್ಸವ
ಆಲೂರು: ರಾಜ್ಯ ಸೇರಿದಂತೆ ದೇಶದೆಲ್ಲೆಡೆ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಪಡೆದ ಬಿಜೆಪಿ ರಾಷ್ಟ್ರದ ಚುಕ್ಕಾಣಿ ಹಿಡಿದಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಕಳೆದ ಹತ್ತು ವರ್ಷಗಳ ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತ ಜನತೆ, ಮೋದಿ ಅವರು ಗುಜರಾತಿನಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬದಲಾವಣೆ ಬಯಸಿ ಬಿಜೆಪಿಗೆ ಮತ ನೀಡಿದ್ದಾರೆ. ಇದರ ಪರಿಣಾಮವಾಗಿ ಬಿಜೆಪಿ ನಿರೀಕ್ಷೆ ಮೀರಿ ಸ್ಥಾನ ಗಳಿಸಿದೆ. ಮೋದಿ ಅವರ ಆಡಳಿತದಲ್ಲಿ ಬಿಜೆಪಿ ದೇಶದ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸಲಿದೆ. ರಾಜ್ಯದಲ್ಲಿ ಕೂಡ ಜನತೆ ಆಡಳಿತ ಪಕ್ಷದ ವಿರುದ್ಧ ಮತ ಚಲಾಯಿಸಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು. ಕಾರ್ಯಕರ್ತರಾದ ಎ.ಎಚ್.ರಮೇಶ್, ಎ.ಎಚ್.ಲಕ್ಷ್ಮಣ್, ರವಿಪ್ರಕಾಶ್, ಚಂದ್ರಪ್ಪ, ಜಗದೀಶ, ಪುಷ್ಪ, ಕ್ಯಾಂಟೀನ್ ನಾಗರಾಜ, ಧರ್ಮಪ್ಪ, ಚಂದ್ರಶೇಖರ, ಕುಮಾರ್, ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

