ಹಾಸನ

ಮನೆಗೆ ಬೆಂಕಿ: ಸಾಮಗ್ರಿ ಭಸ್ಮ

Published On :

ಆಲೂರು: ಪಟ್ಟಣದ ಮುಖ್ಯ ರಸ್ತೆಯ ಶಾದಿ ಮಹಲ್ ಪಕ್ಕದ ಮನೆಯೊಂದಕ್ಕೆ ಗುರುವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ  ಪರಿಣಾಮ ಮನೆ ಸಂಪೂರ್ಣ ಭಸ್ಮವಾಗಿದೆ.
ಪಟ್ಟಣದ ಧರ್ಮಪ್ಪ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕಿಡಿಗೇಡಿಗಳು ಕಿಟಕಿಯ ಮೂಲಕ ಬೆಂಕಿ ಹಚ್ಚಿದ್ದು ಮನೆಯಲ್ಲಿದ್ದ ರು. 20 ಸಾವಿರ, ಚಿನ್ನದ ಓಲೆ ಹಾಗು ರೇಷ್ಮೆ ಸೀರೆಗಳು ಸೇರಿದಂತೆ ಬಹುತೇಕ ಎಲ್ಲಾ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿವೆ.
ಧರ್ಮಪ್ಪ ಅವರ ವೃದ್ಧ ತಾಯಿ ಹಾಗೂ ಬುದ್ಧಿಮಾಂದ್ಯ ತಮ್ಮ ಸಿದ್ದಲಿಂಗ ಅದೃಷ್ಟವಶಾತ್  ಆ ಸಂದರ್ಭದಲ್ಲಿ ಮನೆಯಿಂದ ಹೊರಹೋಗಿದ್ದರಿಂದ ಬೆಂಕಿಯಿಂದ ಬಚಾವಾಗಿದ್ದಾರೆ.   ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೌಡರ ಜನ್ಮದಿನ: ವಿಶೇಷ ಪೂಜೆ
ಹಾಸನ: ಮೇ 18 ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 82ನೇ ಹುಟ್ಟುಹಬ್ಬ ಪ್ರಯುಕ್ತ ಬೆಳಗ್ಗೆ 9ಕ್ಕೆ ನಗರದ ನೀರು ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಹಾಗೂ ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ವಿಶೇಷಪೂಜೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಜಿಪಂ, ತಾಪಂ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.