ಹಾಸನ

ಅದು ಬೇರೆ, ಇದು ಬೇರೆ

Published On :

ಅರಕಲಗೂಡು ಕ್ಷೇತ್ರದಲ್ಲಿಯೇ 13 ಸಾವಿರ ಕಡಿಮೆ ಮತಗಳು ಬಂದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮತದಾರರ ಭಾವನೆ ಬದಲಾವಣೆಯಾಗಿರುತ್ತದೆ. ಒಂದೊಂದು ಚುನಾವಣೆಯಲ್ಲಿ ಒಂದೊಂದು ರೀತಿಯಲ್ಲಿ ಇರುತ್ತದೆ. ಆದ್ದರಿಂದ ನನಗೆ ಜಿಲ್ಲೆಯ ಜನತೆ ಈ ಮಟ್ಟಿಗೆ ಮತ ನೀಡಿರುವುದು ನನಗೆ ಸಂತಸ ತಂದಿದೆ ಎಂದರು.


ರಸ್ತೆ ಟೆಂಡರ್ ಆಗಿದೆ
ಅರಕಲಗೂಡು ರಸ್ತೆಯನ್ನು ಈಗಾಗಲೇ ಗುಂಡಿ ಮುಚ್ಚುವ ಕೆಲವನ್ನು ಮಾಡಲಾಗಿದೆ. ಮೇ.5ರಂದು ರಸ್ತೆ ಕಾಮಗಾರಿಗೆ ಟೆಂಡರ್ನ್‌ಡೆಯಲಿದೆ ಎಂದು ಹೇಳಲಾಗಿತ್ತು. ಈಗಾಗಲೇ ಟೆಂಡರ್ ಆಗಿದ್ದು,  ಕೆಲವು ತಾಂತ್ರಿಕ ಕೆಲಸಗಳು ಮಾತ್ರ ಬಾಕಿ ಉಳಿದಿದೆ. ರಸ್ತೆ ಕಾಮಗಾರಿ ಇನ್ನೇನು ಪ್ರಾರಂಭವಾಗಲಿದೆ ಎಂದು ಹೇಳಿದರು. ಆಲೂಗಡ್ಡೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗದು ಎಂಬ ಪತ್ರವನ್ನು ಪೊಟಾಟೋ ಕ್ಲಬ್ ಅಧ್ಯಕ್ಷರಿಗೆ ಸರ್ಕಾರ ಪತ್ರ ನೀಡಿದೆ. ಅವರಿಗೆ ಪತ್ರ ಬರೆದಿರುವ ನನಗೆ ಗೊತ್ತಿಲ್ಲ. ಒಟ್ಟಿನಲ್ಲಿ ನಾವು ಜಿಲ್ಲೆಯಲ್ಲಿ ಆಲೂಗೆಡ್ಡೆ ಸಂಶೋಧನಾ ಕೇಂದ್ರವನ್ನು ಮಾಡುವುದಾಗಿ ಹೇಳಿದರು. ಕಾಂಗ್ರೆಸ್ ಮುಖಂಡರಾದ ಎಚ್.ಕೆ.ಮಹೇಶ್, ಮುನಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.


ಅಭಿವೃದ್ಧಿಗೆ ಆದ್ಯತೆ
ರಾಜ್ಯದಲ್ಲಿ ನಮ್ಮದೆ ಸರ್ಕಾರ ಇರುವುದರಿಂದ ಜಿಲ್ಲೆಯ ಅಭಿವೃದ್ಧಿ ನನ್ನ ಕೈಯಲ್ಲಿ ಸಾಧ್ಯವಾಗುವಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಹೇಳಿದ ಮಂಜು, ಜನರೊಂದಿಗೆ ನಿರಂತರ ಸಂಪರ್ಕವನ್ನು ಹೊಂದಿ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತದೆ. ಈ ಚುನಾವಣೆಯಲ್ಲಿ ನನ್ನ ಪರವಾಗಿ ಕೆಲಸ ಮಾಡಿದಂತಹ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರು ಹಾಗೂ ಇತರರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.