ಹಾಸನ

ಮಂತ್ರಿಗಿರಿ; ಹೈ ತೀರ್ಮಾನಕ್ಕೆ ಬದ್ಧ

Published On :

ಹಾಸನ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಬೇಕೆಂಬ ಆಸೆ ಇದೆ. ಆದರೆ ಅದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹಾಸನ ಲೋಕಸಭೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಎ.ಮಂಜು ಅಭಿಪ್ರಾಯಪಟ್ಟಿದ್ದಾರೆ. ಕೆಲಸ ಮಾಡುವುದಕ್ಕೆ ಗೂಟದ ಕಾರು ಅಥವಾ ಅಧಿಕಾರ ಇರಲೇಬೇಕು ಅಂತ ಏನೂ ಇಲ್ಲ. ಅಧಿಕಾರ ಇಲ್ಲದಿದ್ದರೂ ಸಹ ಅಭಿವೃದ್ಧಿ ಕೆಲಸವನ್ನು ಮಾಡಬಹುದಾಗಿದೆ. ನನಗೆ ಅಧಿಕಾರ ಇರಲಿ ಅಥವಾ ಇಲ್ಲದಿರಲಿ ನಾನು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.



ಜನತೆಗೆ ನಾ ಚಿರಋಣಿ...
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರದು ಕೊನೆ ಚುನಾವಣೆ ಎಂಬ ಕಾರಣಕ್ಕೆ ಗೆದ್ದಿದ್ದಾರೆ. ಈ ಚುನಾವಣೆಯಲ್ಲಿ ತಾವು ಸೋತಿದ್ದರೂ, ತಾನೇ ಗೆದ್ದಿರುವೆ ಎಂಬ ಭಾವನೆ ನನ್ನಲ್ಲಿ ಇದೆ. ಜಿಲ್ಲೆಯ ಜನತೆ ಈ ಮಟ್ಟಿಗೆ ನನಗೆ ಬೆಂಬಲ ನೀಡಿರುವುದು ಸಂತಸ ತಂದಿದೆ. ಜಿಲ್ಲೆಯ ಜನತೆ ನನ್ನನ್ನು ಗುರುತಿಸಿ 4,09,379 ಮತ ನೀಡಿದ್ದಾರೆ. ಆದ್ದರಿಂದ ಜಿಲ್ಲೆಯ ಜನತೆಗೆ ನ್ಯಾಯ ಸಿಗುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.