ಮೋದಿ ಭರ್ಜರಿ ಗೆಲವು: ಬಿಜೆಪಿ ಕಾರ್ಯಕರ್ತರಿಗೆ ವಿಶೇಷ ಔತಣ
ಅರಸೀಕೆರೆ: ಲೋಕಸಭಾ ಚುನಾವಣೆಯಲ್ಲಿ ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿರುವ ಸಂತಸದಲ್ಲಿ ಕ್ಷೇತ್ರದ ಮಾಜಿ ಶಾಸಕ ಎ.ಎಸ್.ಬಸವರಾಜು ತಮ್ಮ ತೋಟದ ಮನೆಯಲ್ಲಿ ಭಾನುವಾರ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದರು.
ಈ ಔತಣಕೂಟದಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಎನ್.ದುರ್ಗಪ್ಪ ಶೆಟ್ಟಿ, ನಗರಾಧ್ಯಕ್ಷ ಕೆ. ವಿ. ಹಿರಿಯಣ್ಣಯ್ಯ, ಮುಖಂಡರಾದ ಪರಶುರಾಮರಾವ್, ಎ.ಸಿ.ಶಂಕರಯ್ಯ, ರೇವಣ್ಣಸಿದ್ದಪ್ಪ, ರುದ್ರಮುನಿಸ್ವಾಮಿ,ಗೋವಿಂದರಾಜು, ನಾಗೇಶ್, ನವಲ್‌ಗುಂದ್, ಕೆ.ಆರ್.ಮುರುಳೀಧರ್, ಶ್ರೀನಿವಾಸ್, ಬೊಮ್ಮೇನಹಳ್ಳಿ ಪರಮಶಿವಯ್ಯ ಬಾಣಾವರ ಮಹಾಲಿಂಗಪ್ಪ, ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಇದ್ದರು.
ಎನ್‌ಡಿಎ ದಿಗ್ವಿಜಯ: ವಿಹಿಂಪ ವಿಶೇಷ ಪೂಜೆ
ಹಾಸನ: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ದಿಗ್ವಿಜಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭಾನುವಾರ ನಗರದ ದೇವಿಗೆರೆಯ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಿಸಿದರು.
ದೇವರಿಗೆ ವಿಶ್ವಹಿಂದೂ ಪರಿಷತ್ ಹಾಗೂ ವರ್ತಕರು ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನಕಾಯಿಗಳನ್ನು ಒಡೆದು ವಿಜಯೋತ್ಸವ ಆಚರಿಸಿದರು.
ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಿವಾಸ ಗೌಡ, ಬಿಜೆಪಿ ಮುಖಂಡ ಸದಾಶಿವು, ವರ್ತಕರಾದ ಬಸವರಾಜ್, ಸುದರ್ಶನ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

