ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸ್ಥೈರ್ಯ ಅಗತ್ಯ: ಕುಮಾರಸ್ವಾಮಿ
ಸಕಲೇಶಪುರ: ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನದ ಕೊರತೆಯಿಂದಾಗಿ ವ್ಯಕ್ತಿತ್ವ ವಿಕಸನ ಕುಂಠಿತವಾಗುತ್ತಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಣವು ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಲು ಪೂರಕವಾಗಿರಬೇಕು. ವಿದ್ಯಾರ್ಥಿಗಳೂ ಸಹ ಕೇವಲ ಪುಸ್ತಕದ ಹುಳುಗಳಾಗದೆ ಪ್ರಚಲಿತ ವಿದ್ಯಮಾನಗಳು, ಕ್ರೀಡೆ, ಮನರಂಜನೆ, ರಾಜಕೀಯ, ದೇಶದ ಆರ್ಥಿಕತೆ ಮೊದಲಾದ ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರಬೇಕು ಎಂದರು.
ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಪೂರಕವಾದಂತೆ ಕಾಲೇಜುಗಳು ಕೆಲಸ ಮಾಡಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಅಂಕಗಳಿಂದ ಏನನ್ನೂ ಪಡೆಯಲು ಸಾಧ್ಯವಿಲ್ಲ. ಪಠ್ಯ ವಿಷಯಗಳಲ್ಲಿ ಸಾಧನೆ ಮಾಡುವ ಜೊತೆಗೆ ಆತ್ಮ ವಿಶ್ವಾಸ, ಗುರಿ, ಕಷ್ಟ ಸುಖಗಳನ್ನು ಎದುರಿಸುವ ಸ್ಥೈರ್ಯ ವದ್ಧಿಸಿಕೊಂಡರೆ ಜೀವನದಲ್ಲಿ ಸುಖ, ನೆಮ್ಮದಿಯಿಂದಿರಲು ಸಾಧ್ಯ ಎಂದು ತಿಳಿಸಿದರು.
ಸಮಾರೋಪ ಭಾಷಣ ಮಾಡಿದ ಹಾಸನದ ಎವಿಕೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಎಚ್.ಎಲ್. ಮಲ್ಲೇಶಗೌಡ ಮಾತನಾಡಿ, ಹಳ್ಳಿಯ ಬದುಕು ವಿಶ್ವ ಕೋಶದಂತೆ. ಇದನ್ನು ಸರಿಯಾಗಿ ಬಳಸಿಕೊಂಡರೆ ಉಜ್ವಲ ಭವಿಷ್ಯ ಕಾಣಬಹುದು. ಹಳ್ಳಿಗಳನ್ನು ತಾತ್ಸಾರದಿಂದ ಕಾಣದೆ ಅಲ್ಲಿಯೇ ಗಟ್ಟಿತನ ಕಂಡುಕೊಂಡರೆ ಜ್ಞಾನ ಭಂಡಾರದ ಕೀಲಿಕೈ ಹೊಂದಲು ಸಾಧ್ಯವಿದೆ ಎಂದರು. ಸಕ್ರಿಯ ಪಾಲ್ಗೊಳ್ಳುವಿಕೆ, ಆಸಕಿಧಿಸಿದಂತೆ ಪ್ರಶ್ನೆಗಳನ್ನು ಕೇಳುವ ಮನೋಭಾವ ವಿದ್ಯಾರ್ಥಿಗಳಲ್ಲಿದ್ದರೆ ಶಿಕ್ಷಕರೂ ಶ್ರದ್ಧೆಯಿಂದ ಪೂರ್ವ ಸಿದ್ಧತೆ ಮಾಡಿಕೊಂಡು ಪ್ರತಿಭೆ ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದು ಕೊಳ್ಳಬೇಕು, ಕಾಲೇಜೊಂದು ಒಳ್ಳೆಯ ಹೆಸರು ಪಡೆದಿದೆ ಎಂದಾದರೆ ಅದರಲ್ಲಿ ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ಪಾತ್ರವೂ ಅತೀ ಮುಖ್ಯವಾಗಿರುತ್ತದೆ ಎಂದರು.
ಪ್ರಾಂಶುಪಾಲ ಎಚ್.ಟಿ. ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾಷಣ ಮಾಡುವುದು, ಕೇಳುವುದು ಹಾಗೂ ಭಾಷಣ ಮಾಡಲು ಯೋಗ್ಯರನ್ನು ಹುಡುಕುವುದು ತ್ರಾಸದ ಕೆಲಸವಾಗಿದ್ದರೂ ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಭಾಷಣ ಕೇಳುವುದು ಇಷ್ಟವಾಗದಿದ್ದರೂ ಅದರಿಂದ ನಷ್ಟವೇನಿಲ್ಲ.
ವಿದ್ಯಾರ್ಥಿ ಜೀವನದಲ್ಲಿ ಕಲಿಯಲು ಸಾಧ್ಯವಿರುವ ಒಳ್ಳೆಯ ವಿಚಾರಗಳನ್ನು ಭಾಷಣಗಳ ಮೂಲಕ ಕೇಳಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ತಮ್ಮ ಕಾಲೇಜಿನ ವಿದ್ಯಾರ್ಥಿಗಳ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

