ಹಾಸನ

ದೇವೇಗೌಡರ ಪ್ರವಾಸ 23ರಿಂದ

Published On :

ಹಾಸನ: ಜಿಲ್ಲೆಯ ನಾನಾ ತಾಲ್ಲೂಕುಗಳಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮೇ 23 ರಿಂದ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್ ವಕ್ತಾರ ತೊ.ಚ. ಅನಂತಸುಬ್ಬರಾಯ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲವಿಗೆ ಕಾರಣರಾದ ಜಿಲ್ಲೆಯ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸುವ ನಿಟ್ಟಿನಲ್ಲಿ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದರು.
ಏಲ್ಲಿಲ್ಲಿ  ಪ್ರವಾಸ: 23 ರಂದು ಶುಕ್ರವಾರ ಮದ್ಯಾಹ್ನ 12.15ಕ್ಕೆ ಬೇಲೂರಿನಲ್ಲಿ ಅಭಿನಂದನೆ ಕಾರ್ಯಕ್ರಮ, 2.15ಕ್ಕೆ ಸಕಲೇಶಪುರ, 4-30ಕ್ಕೆ ಆಲೂರು.
24ರಂದು ಶನಿವಾರ ಬೆಳಿಗ್ಗೆ 10-30ಕ್ಕೆ ಹಾಸನದಲ್ಲಿ ಅಭಿನಂದನೆ ಕಾರ್ಯಕ್ರಮ, 12-30ಕ್ಕೆ ಚನ್ನರಾಯಪಟ್ಟಣ.
26ರಂದು ಸೋಮವಾರ ಮದ್ಯಾಹ್ನ 12ಕ್ಕೆ ಕಡೂರು, 2.30ಕ್ಕೆ ಅರಸೀಕೆರೆಯಲ್ಲಿ ಮತದಾರರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಿರುಗೇಟು:  ಮಾಜಿ ಪ್ರಧಾನಿ ಮೇಲಿನ ಸಿಂಪತಿ ಮೇಲೆ ಜನತೆ ಮತ ನೀಡಿದ್ದಾರೆ ಎಂದು ಕಾಂಗ್ರೆಸ್ಪ್‌ಕ್ಷದವರು ಹೇಳಿಕೆ ನೀಡಲಾಗುತ್ತಿರುವುದು ಅವರ ತಪ್ಪು ಕಲ್ಪನೆ ಎಂದರು. ದೇವೇಗೌಡರ ಕಾಲಾವಧಿಯಲ್ಲಿ ನೀಡಿದ ಅಭಿವಣದ್ಧಿಯ ಕೊಡುಗೆ, ಅವರ ಪರಿಶ್ರಮದ ಮೇಲೆ ಗೆಲುವು ಸಾಧಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದವರ ಹೇಳಿಕೆಗೆ ತಿರುಗೇಟು ನೀಡಿದರು. ಕಡಿಮೆ ಮತಗಳು ಬಂದಿರು ಕ್ಷೇತ್ರದಲ್ಲಿ ಪರಾಮರ್ಶೆ ಮಾಡಿಕೊಳ್ಳುವ ಮೂಲಕ ಮುಂದಿನ ಚುನಾವಣೆಗೆ ಪಕ್ಷವನ್ನು ಬಲಿಷ್ಟ ಮಾಡುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.