ಪುಸ್ತಕ ಮುಟ್ಟುಗೋಲಿಗೆ ಆಗ್ರಹ
ಹಾಸನ: ಲೇಖಕ ಕೆ.ಎಸ್.ನಾರಾಯಣಾಚಾರ್ಯ ಬರೆದಿರುವ ವಾಲ್ಮೀಕಿ ಯಾರು ಎಂಬ ವಿವಾದಿತ ಪುಸ್ತಕವು ಶಾಂತಿಯುತ ಸಮಾಜದಲ್ಲಿ ವಿಷಬೀಜ ಬಿತ್ತುವಂತಹ, ಶೋಷಿತ ಸಮುದಾಯಗಳ ಭಾವನೆಗಳಿಗೆ ಕುಂದು ಉಂಟು ಮಾಡುವ ಕಾರಣ ಈ ಪುಸ್ತಕವನ್ನು ತಕ್ಷಣ ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಲೇಖಕರನ್ನು ಬಂಧಿಸಬೇಕು. ಅಲ್ಲದೆ ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲು ಹೆಚ್ಚಿಸಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಕರ್ನಾಟಕ ವಾಲ್ಮೀಕಿ ಸೇನೆ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸೋಮವಾರ ವಾಲ್ಮೀಕಿ ಸಮಾಜದವರು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದ ಆವರಣದಿಂದ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ಬಿ.ಎಚ್.ರಸ್ತೆಯ ಮೂಲಕ ತಾಲೂಕು ಕಚೇರಿವರೆಗೆ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಲೇಖಕ ಕೆ.ಎಸ್.ನಾರಾಯಣಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗುತ್ತ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು. ನಂತರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ಸೇನೆ ರಾಜ್ಯಾಧ್ಯಕ್ಷ ಪ್ರತಾಪ್ ಮದಕರಿ ಮಾತನಾಡಿ, ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಶೇ.7.5 ರಷ್ಟು ಹೆಚ್ಚಿಸಬೇಕೆಂದು ಆಗ್ರಹಿಸಿದರು.
ನಂತರ ತಹಸೀಲ್ದಾರ್ ನಟರಾಜ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಟಿ.ಜಿ.ಬಸವರಾಜು, ಜಿಲ್ಲಾಧ್ಯಕ್ಷ ಎಸ್.ಎಸ್.ನಂದೀಶ್, ಕಾರ್ಯದರ್ಶಿ ಕೆ.ಎನ್.ಗಿರೀಶ್, ಮುಖಂಡರಾದ ಶೇಖರಪ್ಪ, ಮಲ್ಲೇಶ್, ಯರಿಗೇನಹಳ್ಳಿ ತಿಮ್ಮಯ್ಯ, ಹಿರೇಸಾದರಹಳ್ಳಿ ಜಯಣ್ಣ, ಧನಪಾಲ್, ರಂಗನಾಯಕ, ಕೆ.ಎಸ್.ರವಿಕುಮಾರ್ ಮತ್ತಿತರರು ಭಾಗವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

