ಗೌಡರ ಗೆಲವು ಕಾರ್ಯಕರ್ತರದ್ದೇ
ಕ.ಪ್ರ. ವಾರ್ತೆ ್ಣ ಬೇಲೂರು ್ಣ ಮೇ 21
ತಾಲೂಕಿನ ಜನತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಅತಿ ಹೆಚ್ಚು ಮತ ನೀಡುವ ಮೂಲಕ ಅವರ ಗೆಲವಿಗೆ ಕಾರಣವಾಗಿದ್ದು ಮತದಾರರಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ ಅನಂತಸುಬ್ಬಾರಾಯ ತಿಳಿಸಿದರು.
ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರಿಗೆ ಅಭಿನಂದನೆ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಲೋಕಸಭೆ ಚುನಾವಣೆಯನ್ನು ಏದಿರಿಸಿದಂತೆ ಮುಂದಿನ ದಿನಗಳಲ್ಲಿ ಬರುವ ಸ್ಥಳಿಯ ಸಂಸ್ಥೆ ಚುನಾವಣೆಗಳಲ್ಲಿ ಕೆಲಸ ನಿರ್ವಹಿಸಬೇಕಿದ್ದು, ಇದಕ್ಕಾಗೆ ಕಾರ್ಯಕರ್ತರು ಸನ್ನದ್ಧರಾಗಬೇಕೆಂದು ತಿಳಿಸಿದರು.
ತಾಲೂಕಿನ ಹಳೇಬೀಡು-ಮಾದಿಹಳ್ಳಿ ಹೋಬಳಿಗಳಿಗೆ ನೀರು ಹರಿಸಲು ಇರುವ ಅಡಚಣೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿ ನೀರು ಹರಿಸಲು ಕ್ರಮಕೈಗೊಳ್ಳುವಂತೆ ಮಾಜಿ ಪ್ರಧಾನಿ ದೇವೇಗೌಡರಲ್ಲಿ ಮನವಿ ಮಾಡಲಾಗುವುದು ಎಂದರು.
ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಎಂ.ಎ.ನಾಗರಾಜ್ ಮಾತನಾಡಿ ಕಾಂಗ್ರೇಸ್ ಪಕ್ಷದವರು ಚುನಾವಣೆಯಲ್ಲಿ ದೇವೇಗೌಡರ ಬೆನ್ನುಮೂಳೆ ಮುರಿಯುವುದಾಗಿ ಜಂಭ ಕೊಚ್ಚಿಕೊಂಡಿದ್ದರು ಜಿಲ್ಲೆಯಲ್ಲಿ ಜನತೆ ಅಧಿಕ ಮತ ನೀಡುವ ಮೂಲಕ ಕಾಂಗ್ರೆಸ್ಸಿಗೆ ಪಾಠ ಕಲಿಸಿದ್ದಾರೆ ಎಂದ ಅವರು ಇದು ಕಾರ್ಯಕರ್ತರ ಗೆಲುವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಟಿ.ಇಂದಿರಾ, ಹೇಮಾವತಿ. ಮುಖಂಡರಾದ ಸಿ.ಎಸ್.ಪ್ರಕಾಶ್, ತಜಮುಲ್‌ಪಾಷಾ, ಆರ್.ಎಸ್.ಪ್ರಸನ್ನಕುಮಾರ್, ಬಿ.ಸಿ.ಮಂಜುನಾಥ್, ಚಂದ್ರೇಗೌಡ, ಮೊಗಪ್ಪಗೌಡ, ರಂಗೇಗೌಡ, ಈಶ್ವರಪ್ರಸಾದ್, ರಾಜು,ಸಿದ್ದೇಗೌಡ, ತಮ್ಮಣ್ಣಚಾರ್, ಗಂಗಧರ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

