ಮೋದಿ ಅಲೆಯಲ್ಲೂ ಕಾಂಗ್ರೆಸ್ಗೇ ಹೆಚ್ಚು ಮತ: ಉಮಾಶಂಕರ್
ಅರಸೀಕೆರೆ: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪಟ್ಟಣ ಪ್ರದೇಶದ ಬಹುತೇಕ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕ ಮತಗಳನ್ನು ನೀಡುವ ಮೂಲಕ ಬಿಜೆಪಿ ಪಕ್ಷ ಎರಡನೇ ಸ್ಥಾನಕ್ಕೆ ಹಾಗೂ ಜೆಡಿಎಸ್ ಪಕ್ಷ ಮೂರನೇ ಸ್ಥಾನಕ್ಕೆ ತೃಪ್ತಿಪಡುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಉಮಾಶಂಕರ್ ತಿಳಿಸಿದರು.
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಪಟ್ಟಣ ಪ್ರದೇಶದ 27 ವಾರ್ಡ್ಗಳ 40 ಮತಗಟ್ಟೆಗಳ ಪೈಕಿ 25ಕ್ಕೂ ಅಧಿಕ ಮತಗಟ್ಟೆಗಳಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಎ.ಮಂಜು ಅವರನ್ನು ಬೆಂಬಲಿಸಿ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ಗೆ 7,826 ಮತಗಳು, ಬಿಜೆಪಿಗೆ 7,360 ಮತಗಳು ಹಾಗೂ ಜೆಡಿಎಸ್ಗೆ 7,120 ಮತಗಳು ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಪ್ರಥಮ ಸ್ಥಾನದಲ್ಲಿದೆ. ಇದರಿಂದ ಸ್ಪಷ್ಟವಾಗುತ್ತದೆ ಜೆಡಿಎಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದು ಹೇಳಿದರು.
ರಾಷ್ಟ್ರ ಮತ್ತು ರಾಜ್ಯದಲ್ಲಿ ನರೇಂದ್ರ ಮೋದಿ ಅಲೆಯಿದ್ದರೂ ಪಟ್ಟಣ ಪ್ರದೇಶದಲ್ಲಿ ಬಿಜೆಪಿ ಪಕ್ಷವು ಯಾವುದೇ ಸಾಧನೆ ಮಾಡಲು ಸಾಧ್ಯವಾಗಿಲ್ಲ, ಅಂತೆಯೇ ಮಾಜಿ ಪ್ರಧಾನಿಗಳಿಗೆ ಅನುಕಂಪದ ಮತಗಳು ಲಭ್ಯವಾಗದೆ ಕಾಂಗ್ರೆಸ್ ಪಕ್ಷವನ್ನೇ ಜನರು ಬೆಂಬಲಿಸಿರುವುದು ಅತ್ಯಂತ ಹರ್ಷದ ಸಂಗತಿಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಪುರಸಭೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಉದ್ದೇಶ ತಮ್ಮದಾಗಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ಕಾಂಗ್ರೆಸ್ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಹೋರಾಟ ನಡೆಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭಾ ನಾಮನಿರ್ದೇಶಿತ ಸದಸ್ಯರಾದ ಕಾಳೇಗೌಡ, ಜಯಪದ್ಮ, ಅಲ್ಪಸಂಖ್ಯಾತ ಸಮಾಜದ ಮುಖಂಡ ಯೂನಸ್, ಪುರಸಭಾ ಸದಸ್ಯ ರಂಗನಾಥ್, ಎ.ಪಿ.ಎಂ.ಸಿ ನಾಮ ನಿರ್ದೇಶಿತ ಸದಸ್ಯ ಕಾಟೀಕೆರೆ ಉಮೇಶ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

