ಹಾಸನ

ಹಾಳಾಗುತ್ತಿರುವ ಪಾದಚಾರಿ ಮಾರ್ಗ

Published On :

ಅರಸೀಕೆರೆ: ಅರಸೀಕೆರೆ ಪಟ್ಟಣದ ಕಂತೇನಹಳ್ಳಿ ಕೆರೆ ಬಳಿ ಇತ್ತೀಚೆಗೆ ನಿರ್ಮಿಸಿರುವ ಉದ್ಯಾನವನವು ಪಟ್ಟಣದ ಜನತೆಗೆ ವಾಯುವಿಹಾರಕ್ಕೆ ಅತ್ಯಂತ ಪ್ರಶಸ್ತ ತಾಣವಾಗಿದೆ.
ಈ ಉದ್ಯಾನದಲ್ಲಿ ವಾಯುವಿಹಾರಿಗಳಿಗೆ ಓಡಾಡಲು ಸಿಮೆಂಟ್ ಟ್ರ್ಯಾಕ್ಗಳಿಂದ ನಿರ್ಮಿಸಿರುವ ಮಾರ್ಗದಲ್ಲಿ ವಾಹನಗಳ ಸಂಚಾರ ತಡೆಗಟ್ಟುವ ಸಲುವಾಗಿ ಅಲ್ಲಲ್ಲಿ ಸಿಮೆಂಟ್ ಬ್ಯಾರಿಕೇಡ್ಗಳನ್ನು ನಿರ್ಮಿಸಲಾಗಿದೆ. ಆದರೆ ಇತ್ತೀಚಿನ ಕೆಲವು ದಿನಗಳಲ್ಲಿ ದ್ವಿಚಕ್ರವಾಹನ ಸವಾರರು ತಮ್ಮ ವಾಹನಗಳಲ್ಲಿ ಈ ಪಾದಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದು, ವಾಹನ ಓಡಾಟಕ್ಕೆ ಅಡ್ಡಿಯಾಗಿರುವ ಬ್ಯಾರಿಕೇಡ್ಗಳನ್ನು ಮುರಿದುಹಾಕಿದ್ದಾರೆ.
ಈ ವಾಹನ ಸಂಚಾರದಿಂದ ಸಿಮೆಂಟ್ ಟ್ರ್ಯಾಕ್ಗಳು ಅಲ್ಲಲ್ಲಿ ಒಡೆದು ಹೋಗಿದ್ದರೆ, ಮತ್ತಷ್ಟು ಕಡೆ ಸಡಿಲಗೊಂಡಿದೆ. ಇದು ಹೀಗೇ ಮುಂದುವರಿದರೆ ಪಾದಚಾರಿ ಮಾರ್ಗ ಸಂಪೂರ್ಣವಾಗಿ ಕಿತ್ತುಹೋಗಿ ಉದ್ಯಾನದ ಸೌಂದರ್ಯವೂ ಹಾಳಾಗುವುದರಲ್ಲಿ ಸಂಶಯವಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಮಾರ್ಗದಲ್ಲಿ ವಾಹನ ಚಾಲನೆ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಂಡು,  ಪಾದಚಾರಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.