ಹಾಸನ

ಅಕ್ರಮ ಮರಳು ಸಾಗಣೆ ಇಬ್ಬರ ಬಂಧನ

Published On :

ಹಾಸನ: ನಗರ ಮತ್ತು ಅರೇಹಳ್ಳಿ ಹೋಬಳಿ ಗ್ರಾಮದಲ್ಲಿ ಅಕ್ರಮವಾಗಿ ಲಾರಿ ಮತ್ತು ಟ್ರ್ಯಾಕ್ಟರ್‌ನಲ್ಲಿ ಮರಳು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮರಳು ಸಮೇತ ಲಾರಿ ಹಾಗೂ ಟ್ಯ್ರಾಕ್ಟರ್ ಅನ್ನು ವಶಕ್ಕೆ ಪಡೆದಿರುವ ಘಟನೆ ಬುಧವಾರ ನಡೆದಿದೆ.
ಹೊಳೆನರಸೀಪುರ ತಾಲೂಕು ಹಳೇಕೋಟೆ ಹೋಬಳಿಯ ಹನುಮನಹಳ್ಳಿ ಗ್ರಾಮದ ಸುರೇಶ ಎಂಬಾತ  ಬಂಧಿತ ಆರೋಪಿ.
ಹಾಸನದ-ಚನ್ನಪಟ್ಟಣ ಬೈಪಾಸ್ ಪತ್ತಿರ ಕೆಎ-18-ಎ2588ರ ಲಾರಿಯಲ್ಲಿ ಮರಳು ತುಂಬಿರುವುದರ ಬಗ್ಗೆ  ಪೊಲೀಸರು ತಪಾಸಣೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಮರಳು ಸಾಗಿಸುತ್ತಿದ್ದುದು ಕಂಡು ಬಂದಿದೆ.
ಕೂಡಲೇ ಆರೋಪಿ ಸುರೇಶನನ್ನು ಬಂಧಿಸಿದ ಪೊಲೀಸರು, ಮರಳು ಸಮೇತ ಲಾರಿಯನ್ನು ವಶಕ್ಕೆ  ಪಡೆದಿದ್ದಾರೆ. ಈ ಬಗ್ಗೆ  ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಬುಧವಾರ ಅರೇಹಳ್ಳಿ ತೊಳಲು ರಸ್ತೆಯ ಈಶ್ವರ ದೇವಸ್ಥಾನದ ಸಮೀಪ ಇರುವ ಹಳೇ ಮಸೀದಿ ಬಳಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಅರೇಹಳ್ಳಿ  ಹೋಬಳಿ ನಲ್ಕೆ ಗ್ರಾಮದ  ಅನಂತರಾಜು(40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ  ಯಾವುದೇ ಪರವಾನಗಿ ಇಲ್ಲದೆ ಸಾಗಿಸುತ್ತಿದ್ದಾಗ ಪೊಲೀಸರಿಗೆ  ಸಿಕ್ಕಿ ಬಿದ್ದಿದ್ದಾನೆ. ಈ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.