ಹಾಸನ

ಚರಂಡಿ ವ್ಯವಸ್ಥೆ ಇಲ್ಲದೇ ಜನರ ಬವಣೆ

Published On :

ಜಾವಗಲ್: ಗ್ರಾಮ ಪಂಚಾಯಿತಿಯ 4ನೇ ವಾರ್ಡಿಗೆ ಸೇರಿದ ಜಂಡಮ್ಮನ ವಠಾರದಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ಬಡಾವಣೆಯ ಜನರು ಬವಣೆ ಪಡುವಂತಾಗಿದೆ.
   ಬಡಾವಣೆಯ ಮೂರು ರಸ್ತೆಗಳ 2 ಬದಿಯಲ್ಲಿ ನಿರ್ಮಿಸಿರುವ ಚರಂಡಿ ನೀರು ಸಮರ್ಪಕವಾಗಿ ಹರಿಯದೆ ರಸ್ತೆಹಾಗೂ ಖಾಲಿ ನಿವೇಶನಗಳಲ್ಲಿ ಹರಿಯುತ್ತಿದ್ದು ಅಲ್ಲಲ್ಲಿ ನೀರಿನ ಹೊಂಡವಾಗಿದ್ದು ಸೊಳ್ಳೆ ಮತ್ತು ನೊಣಗಳ ವಾಸಸ್ಥಾನವಾಗಿವೆ. ದುರ್ವಾಸನೆಯಿಂದ ಅಕ್ಕಪಕ್ಕದಲ್ಲಿ ವಾಸಿಸುವ ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ ಎಂದು ಬಡಾವಣೆಯ ನಿವಾಸಿಗಳಾದ ರಾಜಪ್ಪ, ಯೋಗೀಶ್, ವಿಶ್ವನಾಥ್, ಶೇಷಣ್ಣ ಮತ್ತಿತರರು ದೂರಿದ್ದಾರೆ. ಚರಂಡಿಗಳ ನೀರು ಹರಿದು ಹೋಗಲು ಸಮರ್ಪಕ ಮೋರಿ ವ್ಯವಸ್ಥೆಯಾಗದೇ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಬಡಾವಣೆಯ ಜನರು ಅನೇಕ ಬಾರಿ ಗ್ರಾ.ಪಂ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಕೂಡಲೇ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಅಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.