ಹಾಸನ

ರಸ್ತೆ ಕಾಮಗಾರಿ ಸ್ಥಗಿತಕ್ಕೆ ಕಾಂಗ್ರೆಸ್ ಕಾರಣ: ಆರೋಪ

Published On :

ಅರಸೀಕೆರೆ: ತಮ್ಮ ಅಧಿಕಾರಾವಧಿಯಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಬೇರೆ ಶಾಸಕರ ಅವಧಿಯಲ್ಲೂ ಆಗಬಾರದು ಎಂಬ ಕಾಂಗ್ರೆಸ್ ಮುಖಂಡರ ದುರಾಲೋಚನೆಯಿಂದಲೇ ಬಾಣಾವರ-ಹುಳಿಯಾರು ರಸ್ತೆ ಕಾಮಗಾರಿ ಸ್ಥಗಿತಗೊಳ್ಳಲು ಕಾರಣ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಪುರಸಭಾಧ್ಯಕ್ಷ ಎನ್.ಎಸ್.ಸಿದ್ದರಾಮಶೆಟ್ಟಿ ಆರೋಪಿಸಿದರು.
ಶುಕ್ರವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದು ಮಾಡಿ ಗುತ್ತಿಗೆದಾರರನ್ನು ಕಾಮಗಾರಿ ನಿರ್ವಹಿಸದಂತೆ ಬೆದರಿಕೆ ಹಾಕಿ ಸ್ಥಗಿತಗೊಳ್ಳಲು ಕಾರಣರಾಗಿ ಸಾರ್ವಜನಿಕರಿಗೆ ತೊಂದರೆ ನೀಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸಿನ ಬ್ರಹ್ಮಾಂಡ ಭ್ರಷ್ಟಾಚಾರ ಲಕ್ಷಾಂತರ ಹಗರಣಗಳಿಂದ ಬೇಸತ್ತ ಯುವಜನಾಂಗ ಬಿಜೆಪಿಯತ್ತ ಒಲವು ತೋರಿದ್ದರಿಂದ ಹಾಗೂ ಮುಸ್ಲೀಮರ ಮತಗಳು ಅಲ್ಪಪ್ರಮಾಣದಲ್ಲಿ ಕಾಂಗ್ರೇಸ್ ಕಡೆ ವಾಲಿದ್ದರಿಂದ ಜೆಡಿಎಸ್ಗೆ ಹಿನ್ನಡೆ ಯಾಗಲು ಕಾರಣವಾಯಿತು ಎಂದರು.
ಸುದ್ದಿಗೋಷ್ಠಿಯಲ್ಲಿ ಪುರಸಭಾಧ್ಯಕ್ಷ ಮೋಹನ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಮುರುಂಡಿ ಜೆಡಿಎಸ್ ತಾಲೂಕು ಕಾರ್ಯದರ್ಶಿ ಸುಬ್ರಹ್ಮಣ್ಯಬಾಬು, ತಾಲೂಕು ಯುವ ಜೆಡಿಎಸ್ ಕಾರ್ಯದರ್ಶಿ ಹೇಮಂತ್, ಪುರಸಭಾ ಸದಸ್ಯ ಪಂಚಾಕ್ಷರಿ, ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.