ಅಡ್ಡಾದಿಡ್ಡಿ ವಾಹನ ನಿಲುಗಡೆ: ಸಂಚಾರಕ್ಕೆ ಕಿರಿಕಿರಿ
ಸಕಲೇಶಪುರ: ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಅತಿಯಾಗಿದ್ದು, ಕಿರಿದಾದ ರಸ್ತೆಗಳಲ್ಲಿ ಅಡ್ಡಾದಿಡ್ಡಿ ನಿಲ್ಲುವ ವಾಹನಗಳಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.
ಪಟ್ಟಣದ ಪ್ರಮುಖ ಜನನಿಬಿಡ ರಸ್ತೆಗಳಾದ ಅಶೋಕ ರಸ್ತೆ, ಆಜಾದ್‌ರಸ್ತೆ ಹಾಗೂ ಸರದಾರ್ ವಲ್ಲಭಭಾಯಿ ಪಟೇಲ್ ರಸ್ತೆ ಹಾಗೂ ಬಸವೇಶ್ವರ ರಸ್ತೆ ಹಳೆ ಬಸ್ ನಿಲ್ದಾಣದ ಮುಂಭಾಗದ ರಸ್ತೆಗಳಲ್ಲಿ ಪಾದಚಾರಿ ರಸ್ತೆಗಳೆಲ್ಲ ವರ್ತಕರಿಂದ ಅತಿಕ್ರಮಣವಾಗಿದ್ದು, ಕಿರಿದಾದ ರಸ್ತೆಗಳಲ್ಲಿ ಜನರು ರಸ್ತೆಯಲ್ಲೇ ಸಂಚರಿಸಬೇಕಿದೆ.
ಇದಲ್ಲದೆ ಹೆಚ್ಚಿರುವ ವಾಹನಗಳಿಗೆ ಅನುಗುಣವಾಗಿ ರಸ್ತೆಗಳು ವಿಸ್ತರಣೆಯಾಗದೆ ಇರುವುದು ಹಾಗೂ ವಾಹನಗಳ ನಿಲುಗಡೆಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಇರುವ ಕಾರಣ ಬೇಕಾಬಿಟ್ಟಿ ವಾಹನಗಳು ನಿಲುಗಡೆಯಾಗುತ್ತಿರುವುದರಿಂದ ನಿತ್ಯ ಟ್ರಾಫಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಬಹುತೇಕ ರಸ್ತೆಗಳು ಕಾಂಕ್ರಿಟೀಕರಣಗೊಂಡಿದೆ. ಈ ಎಲ್ಲ ರಸ್ತೆಗಳ ಅಂಚಿಗೆ ಮಣ್ಣು ಹಾಕದ ಪರಿಣಾಮ ರಸ್ತೆ ಮಧ್ಯದಲ್ಲೆ ವಾಹನ ನಿಲುಗಡೆ ಮಾಡುತ್ತಿರುವುದು ಸಹ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. 2012ರಲ್ಲಿ ಈ ಹೆದ್ದಾರಿಯಲ್ಲಿ ನಡೆದ ಸರಣಿ ಅಪಘಾತದಿಂದಾಗಿ ಪೋಲಿಸರು ಹೆದ್ದಾರಿಯಲ್ಲಿ ವಾಹನ ನಿಲುಗಡೆ ನಿಷೇಧಿಸಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ವಾಹನ ನಿಲುಗಡೆ ನಿಷೇಧವನ್ನು ಸಡಿಲಗೊಳಿಸಿರುವುದರಿಂದಾಗಿ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

