ಹಾಸನ

ಕೆ-ಕಿಸಾನ್ ಸಾಫ್ಟ್‌ವೇರ್‌ಗೆ ರೈತರ ಮಾಹಿತಿ ಸೇರ್ಪಡೆ

Published On :

ಹೊಳೆನರಸೀಪುರ: ತಾಲೂಕಿನ ಕೃಷಿ ಇಲಾಖೆಯಲ್ಲಿ ಕೆ-ಕಿಸಾನೆ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಕೃಷಿ ಇಲಾಖೆಯಿಂದ ಸಿದ್ದಪಡಿಸಲಾಗಿರುವ ಕೆ-ಕಿಸಾನ್ ಸಾಫ್ಟ್‌ವೇರ್‌ನಲ್ಲಿ ರೈತರ ದತ್ತಾಂಶ ಸೃಜನೆ ಮಾಡಲಾಗುತ್ತಿದೆ ಎಂದು ಇಲ್ಲಿನ ಸಹಾಯಕ ಕೃಷಿ ನಿರ್ದೇಶಕ ಡಾ.ಯು.ಎಚ್. ಭಾನುಪ್ರಕಾಶ್ ತಿಳಿಸಿದ್ದಾರೆ.
ಈ ಯೋಜನೆಯಡಿ ರೈತರು ತಮ್ಮ ಜಮೀನು ಮತ್ತು ಬೆಳೆ ವಿವರ, ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಕಾರ್ಡ್, ಪಡಿತರ ಕಾರ್ಡ್‌ಸಂಖ್ಯೆ ಹಾಗೂ ಇತರೆ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಪಹಣಿ ಪತ್ರ, ಬ್ಯಾಂಕ್ ಖಾತೆ ಪುಸ್ತಕ ಮತ್ತು ಆಧಾರ್ ಹಾಗೂ ಪಡಿತರ ಕಾರ್ಡ್‌ನ ಜೆರಾಕ್ ಪ್ರತಿಯೊಂದಿಗೆ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಿದಲ್ಲಿ ಅವುಗಳನ್ನು ಕೆ-ಕಿಸಾನ್ ಸಾಫ್ಟ್‌ವೇರ್‌ನಲ್ಲಿ ನೋಂದಣಿ ಮಾಡಿ ರೈತರಿಗೆ ಪ್ರತ್ಯೇಕ ಗುರುತಿನ ಸಂಖ್ಯೆ ಕೊಡಲಾಗುವುದು.
ಪ್ರಾರಂಭಿಕ ಹಂತದಲ್ಲಿ ಕಸಬಾ ಹೋಬಳಿ ವ್ಯಾಪ್ತಿಗೆ ಸೇರುವ ಹಳ್ಳಿಗಳಲ್ಲಿ ಈ ನೋಂದಣಿ ಕಾರ್ಯ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ತಾಲೂಕಿನ ಎಲ್ಲ ಹೋಬಳಿಗಳಿಗೂ ವಿಸ್ತರಿಸಲಾಗುವುದೆಂದು ಅವರು ತಿಳಿಸಿದರು.
ಈಗಾಗಲೇ ಕಸಬಾ ಹೋಬಳಿಯಲ್ಲಿ ಕೃಷಿ ಇಲಾಖೆಯ ಅನುವುಗಾರರು ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಕೆ-ಕಿಸಾನ್‌ಗೆ ಸಂಬಂಧಿಸಿದ ಮಾಹಿತಿಯನ್ನು ರೈತರಿಂದ ಸಂಗ್ರಹ ಮಾಡುತ್ತಿದ್ದು ಅನುವುಗಾರರಿಗೆ ರೈತರು ಸಹಕರಿಸಿ ಸಂಬಂಧಪಟ್ಟ ಮಾಹಿತಿಯನ್ನು ನೀಡಬೇಕಾಗಿ ತಿಳಿಸಿದರು.
ರೈತರು ಬಿತ್ತನೆ ಬೀಜ ಹಾಗೂ ಇತರೆ ಪರಿಕರಗಳ ಖರೀದಿಗೆ ರೈತರ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೂಕ್ತ ದಾಖಲೆಗಳನ್ನು ಅರ್ಜಿಯ ಜೊತೆ ಸಲ್ಲಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ನೋಂದಣಿ ಕಡ್ಡಾಯ
ಕೃಷಿ ಇಲಾಖೆಯ ಯಾವುದೇ ಯೋಜನೆಗಳಡಿ ರೈತರು ಸೌಲಭ್ಯ ಪಡೆಯಲು, ಬಿತ್ತನೆ ಬೀಜ, ಕೃಷಿ ಯಂತ್ರೋಪಕರಣ ಹಾಗೂ ಇತರೆ ಪರಿಕರಗಳಿಗೆ ಸಹಾಯಧನ ಪಡೆಯಲು ನೋಂದಣಿ ಮಾಡಿಸುವುದು ಕಡ್ಡಾಯವಾಗಿರುವುದರಿಂದ ಎಲ್ಲ ರೈತರು ತಪ್ಪದೇ ಸೂಕ್ತ ದಾಖಲೆಗಳೊಂದಿಗೆ ಕೆ-ಕಿಸಾನ್ ಯೋಜನೆಯಡಿ ನೋಂದಣಿ ಮಾಡಿಸಿ ಗುರುತಿನ ಸಂಖ್ಯೆ ಪಡೆಯಬೇಕು.
ಟಿ  ಡಾ.ಯು.ಎಚ್. ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.