ಹಾಸನ

ನಾನಾ ಕಡೆ ದಾಳಿ 16 ಜೂಜುಕೋರರ ಬಂಧನ

Published On :

ಹಾಸನ:  ಜಿಲ್ಲೆಯ ನಾನಾ ಕಡೆ ಜೂಜಾಡುತ್ತಿದ್ದ 16 ಜನರನ್ನು ಪೊಲೀಸರು ಬಂಧಿಸಿ, ಒಟ್ಟು 8,335 ರು. ನಗದನ್ನು ವಶಪಡಿಸಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ.
ತಾಲೂಕಿನ ಗೊರೂರಿನ ಎಚ್‌ಆರ್‌ಪಿ ಕಾಲೊನಿ, ಅಯ್ಯಪ್ಪಸ್ವಾಮಿ ದೇವಸ್ಥಾನದ ಹತ್ತಿರ ತೆಂಗಿನ ತೋಟದ ಪಕ್ಕದಲ್ಲಿ ಅಂದರ್ ಬಾಹರ್ ಆಡುತ್ತಿದ್ದ 5 ಮಂದಿಯನ್ನು ಪಿಎಸ್‌ಐ ಜಯರಾಮ್.ಎಸ್.ಎನ್. ಮತ್ತು  ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿಗಳಾದ ಪವನ್, ಅಭಿ, ಭರತ್ ಕುಮಾರ, ಪ್ರಕಾಶ್, ಗಣೇಶ ಎಲ್ಲರು ಗೊರೂರು ಪಟ್ಟಣದವರು ಎಂದು ಗುರುತಿಸಲಾಗಿದೆ.  
ಇನ್ನೊಂದು ಪ್ರಕರಣದಲ್ಲಿ ಹೊಳೆನರಸೀಪುರ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸೀಗೆತಾಳಮ್ಮ ದೇವಸ್ಥಾನದ ಚಾನಲ್ ಹತ್ತಿರ ಅಂದರ್ ಬಾಹರ್ ಜೂಜಾಡುತ್ತಿದ್ದ 11 ಮಂದಿಯನ್ನು ತಾಲೂಕಿನ ಗ್ರಾಮಾಂತರ ಠಾಣೆಯ ಪಿಎಸ್‌ಐ ಲೋಕೇಶ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.