ಹಾಸನ

ಅದ್ಧೂರಿ ಜಾತ್ರಾ ಮಹೋತ್ಸವ

Published On :

ಹೊಳೆನರಸೀಪುರ: ಪಟ್ಟಣದ ಅಂಬೇಡ್ಕರ್ ನಗರದಲ್ಲಿನ ಶ್ರೀ ಲಕ್ಷ್ಮೀದೇವಿ ಹಾಗೂ ಶ್ರೀ ವೀರಭದ್ರಸ್ವಾಮಿ ದೇವರ ಜಾತ್ರಾ ಮಹೋತ್ಸವವು ನೂರಾರು ಭಕ್ತರ ನಡುವೆ ಆನೆಯೊಂದಿಗೆ ಭಾರಿ ಅದ್ಧೂರಿಯಿಂದ ನಡೆಯಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಗ್ಗೆ ಇಲ್ಲಿನ ಹೇಮಾವತಿ ನದಿಯಿಂದ ನೂರಾರು ಮಹಿಳೆಯರು ಕಳಸಗಳನ್ನು ಹೊತ್ತು ಗಾಂಧಿ ವೃತ್ತದ ಮೂಲಕ ಆನೆಯೊಂದಿಗೆ ಮೆರವಣಿಗೆಯಲ್ಲಿ ಶ್ರೀ ಲಕ್ಷ್ಮೀದೇವಿ ಮತ್ತು ಶ್ರೀ ವೀರಭದ್ರಸ್ವಾಮಿ ದೇವರನ್ನು ಮೆರವಣಿಗೆಯಲ್ಲಿ ಅಂಬೇಡ್ಕರ್ ನಗರದಲ್ಲಿನ ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು. ಬೆಳಗಿನಿಂದಲೇ ಜಾತ್ರಾ ಮಹೋತ್ಸವದ ಅಂಗವಾಗಿ ಅಂಬೇಡ್ಕರ್ ನಗರದಲ್ಲಿನ ಮನೆಗಳ ಮುಂದೆ ಹಸಿರು ತೋರಣ ಹಾಗೂ ರಂಗೋಲಿಗಳನ್ನು ಹೆಂಗಳೆಯರು ಬಿಡಿಸಿದ್ದರು. ದೇವಾಲಯದಲ್ಲಿ ಶ್ರೀ ಲಕ್ಷ್ಮೀದೇವಿ, ಶ್ರೀ ವೀರಭದ್ರಸ್ವಾಮಿ ಹಾಗು ಗಣಪತಿಗೆ ವಿಶೇಷ ಪೂಜೆ  ಹೋಮ ನಡೆಸಲಾಯಿತು.  ಹೋಮ ಹವನದ ನಂತರ ದೇವರ ಕಾರ್ಯಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಜಾತ್ರೆ ಪ್ರಯುಕ್ತ ರಾತ್ರಿ ಬೆಂಗಳೂರಿನ ಮಂಜುಳ ಗುರುರಾಜ್ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ಸಮಾರಂಭದಲ್ಲಿ ಸಮಾಜದ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.