ಹಾಸನ

ಎತ್ತಿನಹೊಳೆ ತಿರುವು ಯೋಜನೆ ಸಾಧಕ-ಬಾಧಕ ಚರ್ಚೆ ಇಂದು

Published On :

ಹಾಸನ: ಸಕಲೇಶಪುರ ತಾಲೂಕಿನ ಹಿರದನಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ತಿರುವು ಯೋಜನೆ ಸಾಧಕ-ಬಾಧಕ ವಿಚಾರ ವಿನಿಮಯ ಸಭೆಯನ್ನು ಮೇ 26 ರಂದು ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ ಎಂದು ಮಲೆನಾಡು ಜನಪರ ಹೋರಾಟ ಸಮಿತಿಯ ಅಧ್ಯಕ್ಷ ಎಚ್.ಎ. ಕಿಶೋರ್‌ಕುಮಾರ್ ತಿಳಿಸಿದ್ದಾರೆ.
ಯೋಜನೆಯಿಂದ ಬಾಧಿತರಾಗಬಹುದಾದ ಹಿರದನಹಳ್ಳಿ, ಮೊಗನಹಳ್ಳಿ, ಹೊಸಹಳ್ಳಿ, ಆಲುವಳ್ಳಿ, ಕಡಗರವಳ್ಳಿ, ಹೊಂಗಡಹಳ್ಳ ಮುಂತಾದ ಗ್ರಾಮಗಳ ಗ್ರಾಮಸ್ಥರು ಮತ್ತು ಪರಿಸರವಾದಿಗಳು, ಸಾಹಿತಿಗಳು, ಹೋರಾಟಗಾರರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಪ್ರಮುಖವಾಗಿ ಕರ್ನಾಟಕ ಜೈವಿಕ ಇಂಧನ ಮಂಡಳಿಯ ಮಾಜಿ ಅಧ್ಯಕ್ಷ ವೈ.ಬಿ.ರಾಮಕೃಷ್ಣ, ಪಶ್ಚಿಮಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಅನಂತ್ ಹೆಗ್‌ಡೆ ಆಶೀಸರ, ಅಂತಾರಾಷ್ಟ್ರೀಯ ಚಿತ್ರಕಲಾವಿದ ದಿನೇಶ್ ಹೊಳ್ಳ, ವಿಜ್ಞಾನ ಕೇಂದ್ರದ ಸಿ. ಯತಿರಾಜು, ಸಾಹಿತಿ ರೂಪ ಹಾಸನ ಮುಂತಾದವರು ಭಾಗವಹಿಸಲಿದ್ದಾರೆ. ನೇತ್ರಾವತಿ ನದಿಯನ್ನು ಆಶ್ರಯಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು ಸಹ ಭಾಗವಹಿಸುತ್ತಾರೆ. ಇದೇ ಸಂದರ್ಭದಲ್ಲಿ ಪಶ್ಚಿಮ ಘಟ್ಟಗಳ ಕರೆ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು ಹಾಗೂ ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.