ಟಿಎಸ್ಸಾರ್ ಸ್ಮಾರಕ, ಮೊಹರೆ ಹನುಮಂತರಾಯ
ಪತ್ರಿಕೋದ್ಯಮ ಪ್ರಶಸ್ತಿಗೆ ನಾಮ ನಿರ್ದೇಶನ ಆಹ್ವಾನ
ಹಾಸನ: ರಾಜ್ಯ ಸರ್ಕಾರ ಪ್ರತಿ ವರ್ಷ ನೀಡುವ ಟಿಎಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹನುಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾನಾ ಪತ್ರಿಕಾ ಸಂಘಟನೆಗಳು ಹಾಗೂ ಮಾಧ್ಯಮ ಸಂಸ್ಥೆಗಳಿಂದ ಅರ್ಹ ಪತ್ರಕರ್ತರ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಟಿಎಸ್ಸಾರ್ ಸ್ಮಾರಕ ಪ್ರಶಸ್ತಿಯನ್ನು ಕನ್ನಡ ಪತ್ರಿಕೋದ್ಯಮ ಕ್ಷೇತ್ರಕ್ಕೆ ಹಾಗೂ ಕನ್ನಡ ಭಾಷೆಗೆ ವಿಶಿಷ್ಟ ಕೊಡುಗೆ ನೀಡಿ, ಜೀವಮಾನ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡಲಾಗುತ್ತದೆ. ಕನಿಷ್ಠ ಮೂವತ್ತು ವರ್ಷ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಅಥವಾ ಈ ಎರಡೂ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.
ಮೊಹರೆ ಹನುಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಕನ್ನಡ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ ವೃತ್ತಿಯಲ್ಲಿ ಪತ್ರಿಕಾ ಸಮೂಹದ ಮಾಲೀಕರಾಗಿ, ಆಡಳಿತಗಾರರಾಗಿ ಕನಿಷ್ಠ 30 ವರ್ಷ ಅನುಭವ ಹೊಂದಿರುವವರನ್ನು ಪರಿಗಣಿಸಲಾಗುತ್ತದೆ.
ಭಾರತೀಯ ಪತ್ರಿಕಾ ಮಂಡಳಿಯಿಂದ ಛೀಮಾರಿ ಅಥವಾ ದಂಡ ಹಾಕಿಸಿಕೊಂಡಲ್ಲಿ, ಯಾವುದೇ ಕ್ರಿಮಿನಲ್ ಅಪರಾಧದಲ್ಲಿ ಭಾಗಿಯಾಗಿದ್ದಲ್ಲಿ, ಅಂತಹ ಪತ್ರಕರ್ತರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಮರಣೋತ್ತರ ಪ್ರಶಸ್ತಿಗೆ ಅವಕಾಶವಿರುವುದಿಲ್ಲ.
ಈ ಎರಡೂ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರ ಪರಿಚಯ, ಸಾಧನೆಯ ಮಾಹಿತಿಯನ್ನು ಶಿಫಾರಸು ಪತ್ರಗಳನ್ನು ಪತ್ರಿಕಾ ಸಂಘಟನೆಗಳು ಹಾಗೂ ಮಾಧ್ಯಮ ಸಂಸ್ಥೆಗಳು ನಿರ್ದೇಶಕರು, ವಾರ್ತಾ ಇಲಾಖೆ, ನಂ.17 ಭಗವಾನ್ ಮಹಾವೀರ ರಸ್ತೆ, ವಾರ್ತಾ ಸೌಧ, ಬೆಂಗಳೂರು-560001 ಇವರಿಗೆ ಜೂನ್ 3 ರೊಳಗೆ ಕಳುಹಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

