ಮಕ್ಕಳು ಎಲ್ಲ ರಂಗಗಳಲ್ಲೂ ತೊಡಗಿಸಿಕೊಳ್ಳಲಿ: ತಿಮ್ಮೇಶ್
ಅರಸೀಕೆರೆ: ಶಾಲಾ ರಜಾ ದಿನಗಳನ್ನು ಶಿಕ್ಷಕರು ವ್ಯರ್ಥವಾಗಿ ಕಾಲ ಕಳೆಯುವ ಬದಲು ಸೇವಾ ಮನೋಭಾವದಿಂದ ತಮ್ಮಲ್ಲಿರುವ ಕಲೆ, ಸಾಹಿತ್ಯ, ಯೋಗ, ನೃತ್ಯ, ಕರಕುಶಲ ವಸ್ತುಗಳ ತಯಾರಿಕೆಯನ್ನು ಮಕ್ಕಳಿಗೆ ಬೇಸಿಗೆ ಶಿಬಿರದ ಮೂಲಕ ಕಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ದೈಹಿಕ ಪರಿವೀಕ್ಷಕ ತಿಮ್ಮೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಸಾಯಿನಾಥ ದೇವಾಲಯದ ಹಿಂಭಾಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬಾಲ ಮಂದಿರ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದ ಓದಿನೊಂದಿಗೆ ಮಕ್ಕಳು ರಜಾದಿನಗಳಲ್ಲಿ ಕಾಲಹರಣ ಮಾಡದೆ ಕರಕುಶಲ ತರಬೇತಿ, ಕಲೆ, ಕ್ರೀಡೆ, ಸಾಹಿತ್ಯ, ಇನ್ನಿತರ ಕಲೆಗಳನ್ನು ಮೈಗೂಡಿಸಿಕೊಂಡು ಎಲ್ಲ ರಂಗಗಳಲ್ಲಿ ತೊಡಗಿಸಿಕೊಂಡಾಗ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸತ್ಯನಾರಾಯಣ ಮಾತನಾಡಿ, ಇಂತಹ ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಮೇಲು-ಕೀಳು ತಾರತಮ್ಯ ದೂರವಾಗಿ ಎಲ್ಲರೂ ಒಂದೇ ಎಂಬ ಸಮಾನತೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಮಕ್ಕಳು ಶಾಲಾ ರಜಾದಿನಗಳಲ್ಲಿ ಟಿ.ವಿ., ಮೊಬೈಲ್ಗೆ ದಾಸರಾಗಿ ತಮ್ಮ ಜೀವನವನ್ನು ವ್ಯರ್ಥಮಾಡಿಕೊಳ್ಳುವುದಕ್ಕಿಂತ ಇಂತಹ ಶಿಬಿರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿಕೊಂಡರೆ ಉತ್ತಮ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂದರು.
ಸಮಾರಂಭದಲ್ಲಿ ಶಿಬಿರದ ನಿರ್ದೇಶಕ ಹರೀಶ್ ಕುಮಾರ್, ಶಿಕ್ಷಣ ಇಲಾಖೆಯ ಇಸಿಒ ಯೋಗೀಶ್ ಹಾಗೂ ರವಿಕುಮಾರ್, ಸಿಡಿಪಿಒ ಕಚೇರಿಯ ಅಂಗನವಾಡಿ ಮೇಲ್ವಿಚಾರಕಿ ದಿವ್ಯಶ್ರೀ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಗಳಗೌರಿ ಶಿಬಿರದಲ್ಲಿದ್ದರು. ಶಿಬಿರಾರ್ಥಿಗಳಿಂದ ನಗೆನಾಟಕ, ನೃತ್ಯ, ಇನ್ನಿತರ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶೋಭಾರಾಣಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

