ಹಾಸನ

ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Published On :

ಹಾಸನ: ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ತಾಲೂಕಿನ ದುದ್ದ ಹೋಬಳಿಯ ಎಚ್.ಕೃಷ್ಣಾಪುರ ಗ್ರಾಮಸ್ಥರು ಖಾಲಿ ಕೊಡ ಪ್ರದರ್ಶಿಸಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್.ವೃತ್ತ, ಬಿ.ಎಂ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ತಾಲೂಕಿನ ದುದ್ದ ಹೋಬಳಿ ಎಚ್. ಕೃಷ್ಣಾಪುರ ಗ್ರಾಮದಲ್ಲಿ ಕುಡಿಯುವ ನೀರು, ವಿದ್ಯುತ್ ಹಾಗೂ ಇತರೆ ಸಮಸ್ಯೆಗಳನ್ನು ಗ್ರಾಮಸ್ಥರು ಎದುರಿಸುತ್ತಿದ್ದಾರೆ. ಕುಡಿಯುವ ನೀರಿಗೆ ದಿನನಿತ್ಯ ಹಾಹಾಕಾರ ಉಂಟಾಗಿದೆ. ಗ್ರಾಮದಲ್ಲಿ ಬಾವಿಗಳಿದ್ದರೂ ವಿದ್ಯುತ್ ಇಲಾಖೆಯಲ್ಲಿ ಟಿಸಿಗಳನ್ನು ತಂದು ಅಳವಡಿಸಿರುವುದಿಲ್ಲ. ಜಮೀನಿನ ಬೆಳೆಗೆ ನೀರಿನ ಕೊರತೆ ಎದುರಾಗಿದ್ದು ಆತಂಕ ವ್ಯಕ್ತಪಡಿಸಿದರು. ಕಳೆದ ಕೆಲವು ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಬರುತ್ತಿಲ್ಲ. ಕುಡಿಯುವ ನೀರಿಲ್ಲದೆ ಗ್ರಾಮಸ್ಥರು  ಸಂಕಷ್ಟ ಎದುರಿಸುತ್ತಿದ್ದು, ಟ್ರ್ಯಾಕ್ಟರ್ ಮೂಲಕ ನೀರನ್ನು ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟಾದರೂ ಟ್ರ್ಯಾಕ್ಟರ್‌ನಲ್ಲಿ ನೀರು ಸಾಲುತ್ತಿಲ್ಲ. ಈ ವಿಷಯವಾಗಿ ಹಲವು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರು ಸಹ ಈವರೆಗೆ ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಿಪಡಿಸಿದರು.
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಂಗೇಗೌಡ, ಗ್ರಾಮಸ್ಥರಾದ ಉಮೇಶ್, ನಾಗರಾಜ್, ನಂಜುಂಡಾಚಾರ್, ರಂಗೇಗೌಡ, ಕುಮಾರ್, ಮಂಜುನಾಥ್, ಸಂತೋಷ್, ಆನಂದ ಕುಮಾರ್ ಹಾಗೂ ಇತರರು ಇದ್ದರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.