ಅಕ್ರಮ ಮರಳು ಅಡ್ಡೆ ಮೇಲೆ ದಾಳಿ
ಸಕಲೇಶಪುರ : ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರು ಬಂದ ಹಿನ್ನೆಲೆ ತಾಲೂಕಿನ ನಾನಾ ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಅಪಾರ ಪ್ರಮಾಣದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ವಿಭಾಗಾಧಿಕಾರಿ ಮಧುಕೇಶ್ವರ್ ನೇತೃತ್ವದಲ್ಲಿ ತಹಸಿಲ್ದಾರ್ ಪಾರ್ವತಿ, ಲೋಕೋಪಯೋಗಿ ಇಲಾಖೆಯ ವೆಂಕಟೇಶ್, ಎಸ್ಐ ಭರತ್ಗೌಡ ಹಾಗೂ ಸಿಬ್ಬಂದಿ ತಾಲೂಕಿನ ಮಳಲಿ, ಹಾಲೇಬೇಲೂರು, ಕೌಡಳ್ಳಿಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮರಳನ್ನು ವಶಪಡಿಸಿಕೊಂಡಿತು. ಇದೇ ವೇಳೆ ಮರಳು ತುಂಬಿಕೊಂಡು ಬರುತ್ತಿದ್ದ ಮೂರು ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದಿದೆ.
ತಾಲೂಕಿನ ಹೇಮಾವತಿ ನದಿಯೊಡಲು ಬಗೆದು ಮರಳು ಕಳ್ಳಸಾಗಣೆ ಮಾಡುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಮಧುಕೇಶ್ವರರಾವ್ ನೇತೃತ್ವದ ತಂಡ ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಸುಮಾರು 50 ಲಾರಿ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದು ಪತ್ತೆಯಾಗಿದೆ.
ರಾಜ್ಯದಲ್ಲಿ ಮರಳು ನೀತಿ ಜಾರಿಯಲ್ಲಿದ್ದರೂ, ಹಾಸನ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ದಂಧೆಗೆ ಕಡಿವಾಣ ಬಿದ್ದಿಲ್ಲ. ತಾಲೂಕಿನ ಮೂಲಕ ಹಾದು ಹೋಗಿರುವ ಹೇಮಾವತಿ ನದಿಯ ಒಡಲನ್ನು ಎಲ್ಲೆಂದರಲ್ಲಿ,ಬಗೆದು ಕಳ್ಳಸಾಗಣೆ ಮಾಡಲಾಗುತ್ತಿದೆ.
ಮರಳನ್ನು ಲೋಕೋಪಯೋಗಿ ಇಲಾಖೆ ವಶಕ್ಕೆ ತೆಗೆದುಕೊಂಡು ಸಾರ್ವಜನಿಕ ಬಳಕೆಗೆ ನೀಡಲಾಗುವುದು ಎಂದು ಎಸಿ ಮಧುಕೇಶ್ವರ ರಾವ್ ತಿಳಿಸಿದ್ದಾರೆ. ಅಲ್ಲದೆ ಅಕ್ರಮ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜತೆಗೆ ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

