ಹಾಸನ

ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಬದಲಾವಣೆ ಸಾಧ್ಯ

Published On :

ಹೊಳೆನರಸೀಪುರ: ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಎಂ.ಕಾಂ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಸಂಬಂಧಗಳ ಕುರಿತು ವಿಚಾರ ಸಂಕಿರಣ ನಡೆಯಿತು.
ಕಾರ್ಯಕ್ರಮದಲ್ಲಿ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ನೂತನ ಪ್ರಧಾನ ಮಂತ್ರಿಗಳ ಪದಗ್ರಹಣ ಸಂದರ್ಭದಲ್ಲಿ ಸಾರ್ಕ್ ಸದಸ್ಯ ರಾಷ್ಟ್ರಗಳ ಪ್ರಧಾನ ಮಂತ್ರಿಗಳು ಮತ್ತು ಅಧ್ಯಕ್ಷರನ್ನು ಆಹ್ವಾನಿಸಿದ ನರೇಂದ್ರ ಮೋದಿ ನಿರ್ಧಾರದಿಂದ ಭಾರತದ ಆರ್ಥಿಕತೆಯಲ್ಲಿ ಬದಲಾವಣೆ ಕಾಣಬಹುದು, ಮತ್ತು ಮುಂದಿನ ದಿನಗಳಲ್ಲಿ ಎಲ್ಲ ದೇಶಗಳೊಂದಿಗೂ ಸೌಹಾರ್ಧ ಮತ್ತು ಶಾಂತಿಯುತವಾಗಿ ಮುಂದುವರಿಯಬಹುದು ಎಂದು ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಜಿ.ಜಿ.ರಾಜಶೇಖರ ತಿಳಿಸಿದರು.
ನೂತನ ಪ್ರಧಾನ ಮಂತ್ರಿ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಾರ್ಕ್ ರಾಷ್ಟ್ರಗಳನ್ನು ಆಹ್ವಾನಿಸಿದ್ದು ಉತ್ತಮ ಹೆಜ್ಜೆ. ಹಾಗೂ ಭಾರತದ ಔಷಧೀಯ ಉಪಕರಣಗಳಿಗೆ ಕೆಲವು ರಾಷ್ಟ್ರಗಳಲ್ಲಿ ಉತ್ತಮ ಬೇಡಿಕೆ ಇದ್ದು, ಇದರಿಂದ ಭಾರತದ ವಾಣಿಜ್ಯ ಕ್ಷೇತ್ರ ಇನ್ನೂ ಪ್ರಗತಿಯತ್ತ ಸಾಗಬಹುದು ಎಂದು ಕಾಲೇಜಿನ ಗ್ರಂಥಪಾಲಕರಾದ ನಾಗರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಪ್ರೊ.ಎಸ್.ಕೆ. ಚಂದ್ರಕುಮಾರ್, ಅವರು ಸಾರ್ಕಾ ಎಂದರೇನು, ಅದರ ಬೆಳವಣಿಗೆ, ರೂಪುರೇಷೆಗಳ ಕುರಿತು ಹಾಗೂ ಮೋದಿಯವರ ದಿಟ್ಟ ಹೆಜ್ಜೆಯನ್ನು ಶ್ಲಾಘಿಸಿದರು.
ಎಚ್.ಎಂ.ಕಿರಣ್, ಉಪನ್ಯಾಸಕರಾದ  ಅರುಣ್, ಕೆ.ವಿ.ಕೇಶವಪ್ರಸನ್ನ ಮತ್ತು ರಾಘವೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.