ಆಂಗ್ಲ ವ್ಯಾಮೋಹದಿಂದ ಕನ್ನಡ ನಿರ್ಲಕ್ಷ್ಯ: ವಿಷಾದ
ಆಲೂರು: ಇಂದಿನ ಆಧುನಿಕ ಯುಗದಲ್ಲಿ ಆಂಗ್ಲ ವ್ಯಾಮೋಹದಿಂದಾಗಿ ಮಾತೃಭಾಷೆ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ವಿಜಯಕಾಂತ್ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡದ ಬೆಳವಣಿಗೆಗಾಗಿ ಅನೇಕ ಮಹನೀಯರು ಶ್ರಮಿಸಿದ್ದಾರೆ ಆದರೆ, ನಾವು ಅದನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಎಡವಿದ್ದೇವೆ ಎಂದರು.
ಕನ್ನಡಿಗರಾದ ನಾವು ನಮ್ಮ ಮಾತೃಭಾಷೆಯ ಮೇಲೆ ಅಭಿಮಾನವಿಟ್ಟು ಪೋಷಿಸದಿದ್ದರೆ ಅನ್ಯ ಭಾಷೆಗಳ ಹೊಡೆತಕ್ಕೆ ಸಿಕ್ಕು ನಮ್ಮ ಭಾಷೆ ನಾಶವಾಗಿ ಹೋಗುತ್ತದೆ ಆದುದರಿಂದ ನಾವೆಲ್ಲರು ಕನ್ನಡದ ಭಾಷೆಯ ಏಳ್ಗೆಗಾಗಿ ದುಡಿಯೋಣವೆಂದರು.
ಮುಖ್ಯ ಭಾಷಣಕಾರ ಪ್ರೊ. ಮಂಜಯ್ಯ ಮಾತನಾಡಿ, ಕನ್ನಡ ಭಾಷೆಗೆ 3 ಸಾವಿರ ವರ್ಷಗಳ ಇತಿಹಾಸವಿದೆ. ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆ ನಾಶವಾಗುವುದಿಲ್ಲ ತನ್ನ ಒಡಲಲ್ಲಿ ಎಲ್ಲ ಭಾಷೆಗಳನ್ನು ಸೇರಿಸಿಕೊಂಡು ಹೆಮ್ಮರವಾಗಿ ಬೆಳೆಯುವ ಜೀವಂತ ಶಕ್ತಿ ಕನ್ನಡಕ್ಕಿದೆ. ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಬೇಕು ಕನ್ನಡವೇ ಜನಗಳ ಜೀವನಾಡಿ ಅದನ್ನು ಉಳಿಸಿ ಬೆಳೆಸಬೇಕಾದುದು ನಮ್ಮ ಕರ್ತವ್ಯ, ಪ್ರತಿ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವಾಗ ಮಹನೀಯರು ಕನ್ನಡ ಕಟ್ಟುವ ಬಗ್ಗೆ ಮಾತನಾಡುತ್ತಾರೆ ಆದರೆ, ಕಾರ್ಯ ರೂಪಕ್ಕೆ ಬರುತ್ತಿಲ್ಲ ಎಂದು ವಿಷಾದಿಸಿದರು.
ನಾಲ್ವಡಿಯವರು ಕನ್ನಡ ನಾಡು ನುಡಿಯ ಬಗ್ಗೆ ಅನೇಕ ಕನಸುಗಳನ್ನು ಕಟ್ಟಿ ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟು ಹಾಕಿದರು. ಅದನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಈ ಮಣ್ಣಿನಲ್ಲಿ ಒಹುಟ್ಟಿ ಬೆಳೆದ ಎಲ್ಲರಿಗೂ ಇರಬೇಕು ಆಗ ಮಾತ್ರ ಶತಮಾನೋತ್ಸವಕ್ಕೆ ಅರ್ಥ ಬರುತ್ತದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಲಾಂ ಸತ್ತಾರ್, ಪತ್ರಕರ್ತಕ ಸಂಘದ ಅಧ್ಯಕ್ಷ ರಾಘು, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಸಿದ್ದೇಗೌಡ, ಖಜಾಂಚಿ ಪೃಥ್ವಿ, ಗ್ರಂಥಪಾಲಕ ನಾಗರಾಜ, ತಾಲೂಕು ಆಸ್ಪತ್ರೆಯ ವೈದ್ಯ ಯದುರಾಜ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

