ಸರ್ಕಾರಿ ಕಾನೂನು ಕಾಲೇಜಿನಲ್ಲಿ ಚುಟುಕು ಸಾಹಿತ್ಯ ಸ್ಪರ್ಧೆ
ಹೊಳೆನರಸೀಪುರ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಕಾನೂನು ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿಗೊಂದು ಚುಟುಕು ಸಾಹಿತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಉಪನ್ಯಾಸಕರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳೂ ಆದ ಗೊರೂರು ಶಿವೇಶ್ ಉದ್ಘಾಟಿಸಿ ಮಾತನಾಡಿದ ಅವರು, ಚುಟುಕು ಮತ್ತು ಹನಿಗವನಗಳು ಹೇಗಿರಬೇಕು ಎಂಬುದರ ಬಗ್ಗೆ ತಿಳಿಸುತ್ತ ಸಾಹಿತ್ಯದ ಜ್ಯೋತಿ ಬೆಳಗಬೇಕಾದರೆ ಸಾಹಿತ್ಯದ ಪ್ರಕಾರಗಳಾದ ಜನಪದ, ಚುಟುಕು ಪದಗಳು, ಹನಿಗವನ ಪದ್ಯಗಳು, ಗದ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರೇಮಾ ಮಂಜುನಾಥ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಚುಟುಕು ಸಾಹಿತ್ಯಕ್ಕೆ ಸರಿಯಾದ ಪ್ರೋತ್ಸಾಹವಿಲ್ಲದೆ ಅದು ದಿನೇ, ದಿನೇ ತನ್ನ ಅಸ್ತಿತ್ವ ಕಳೆದುಕೊಂಡು ವಿನಾಶದ ಅಂಚಿನಲ್ಲಿ ಸಾಗುತ್ತಿದೆ ಎಂದು ವಿಷಾದಿಸಿದ ಅವರು, ಆದ್ದರಿಂದ ಯುವ ಪೀಳಿಗೆಯು ಸಾಹಿತ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕಿದ್ದು ಹಾಗು ಚುಟುಕು ಸಾಹಿತ್ಯದ ಮೂಲಕ ಸಮಾಜವನ್ನು ತಿದ್ದುವ ಸಾಹಿತಿಗಳು ಹೊರಹೊಮ್ಮಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಲಲಿತಾಬಾಯಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ನೆಮ್ಮದಿ, ಸಂತೋಷ, ಮನರಂಜನೆ ಸಾಹಿತ್ಯದಿಂದ ಮಾತ್ರ ಸಿಗಲು ಸಾದ್ಯ, ಪ್ರತಿಯೊಬ್ಬರಿಗೂ ವಿಶೇಷವಾಗಿ ಸಾಹಿತ್ಯದ ಅರಿವು ಇರಬೇಕೆಂದರು. ಸಮಾರಂಭದಲ್ಲಿ ಲಕ್ಷ್ಮಿನಾಗರಾಜ್, ದಿಲೀಪ್‌ಕುಮಾರ್, ಕುದರಿಹಾಳ್ ಲಿಂಗಪ್ಪ ಇದ್ದರು.
ಚುಟುಕು ಸ್ಪರ್ಧೆಯಲ್ಲಿ ನಯನ್ ಪ್ರಥಮ, ಚೈತ್ರ-ದ್ವಿತೀಯ ಮತ್ತು ಸುನೀತ ತೃತೀಯ ಬಹುಮಾನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

