ಸಿಎಂ ನೀಡಿದ್ದ ಹೇಳಿಕೆ ಏನಾಯಿತು?: ಜೆಡಿಎಸ್
ಹಾಸನ: ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆ ಇಲ್ಲ. ಈ ಬಾರಿಯೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ . ಅಲ್ಲದೇ ರಾಜ್ಯದಲ್ಲೂ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಧಿಯಾಗಿ ಅ ಪಕ್ಷದ ವರಿಷ್ಠರು ತಾವು ಹೋದಲ್ಲೆಲ್ಲ ಹೇಳಿಕೊಂಡಿದ್ದರು. ಆದರೆ, ಕಾಂಗ್ರೆಸ್ ಸ್ಥಿತಿ ಏನಾಯಿತು? ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡ ಬಿ.ಶಿವರಾಂ ಉತ್ತರಿಸಬೇಕು ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಚನ್ನವೀರಪ್ಪ ತಿರುಗೇಟು ನೀಡಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಅಪ್ರಬುದ್ಧ ರಾಜಕಾರಣಿ ಎಂದು ಕರೆದಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾಂ, ನಿಜವಾದ ಪ್ರಬುದ್ಧ ರಾಜಕಾರಣಿ ಆಗಿದ್ದರೆ ಅವರನ್ನು ಜನರು ಚುನಾವಣೆಗಳಲ್ಲಿ ಎಂದೋ ಗೆಲ್ಲಿಸುತ್ತಿದ್ದರು ಎಂದು ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಚನ್ನವೀರಪ್ಪ ಲೇವಡಿ ಮಾಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಎಚ್.ಡಿ. ದೇವೇಗೌಡ ಅವರನ್ನು ಹಿರಿಯರು. ಮಾಜಿ ಪ್ರಧಾನಿಗಳು ಎಂಬ ಅನುಕಂಪದಿಂದ ಜನರು ಗೆಲ್ಲಿಸಿದ್ದಾರೆ ಎಂದು ಬಿ. ಶಿವರಾಂ ಹೇಳಿದ್ದಾರೆ. ಆದರೆ, ಎಚ್.ಡಿ. ದೇವೇಗೌಡರು ತಮಗೆ ಪ್ರಾಯ ಇದ್ದ ಕಾಲದಿಂದಲೂ ಹಲವು ಚುನಾವಣೆಗಳಲ್ಲಿ ಗೆಲ್ಲುತ್ತ ಬಂದಿದ್ದಾರೆ. ಈಗ ಅವರಿಗೆ ವಯಸ್ಸಾಗಿದೆ ಎಂಬ ಕಾರಣಕ್ಕೆ ಗೆದ್ದಿದ್ದಾರೆ ಎಂಬ ಬಿ.ಶಿವರಾಂ ಅವರ ಮಾತು ಕ್ಷುಲ್ಲಕವಾದುದು ಎಂದು ಟೀಕಿಸಿದ್ದಾರೆ.
ಎಚ್.ಡಿ.ದೇವೇಗೌಡರು ಶಾಸಕ, ವಿರೋಧ ಪಕ್ಷದ ನಾಯಕ, ಸಚಿವ, ಮುಖ್ಯಮಂತ್ರಿ, ಪ್ರಧಾನ ಮಂತ್ರಿಯೂ ಆದರು. ಆದರೆ, ಬಿ.ಶಿವರಾಂ ಮಾತ್ರ ಇನ್ನೂ ಇದ್ದಲ್ಲಿಯೇ ಇದ್ದಾರೆ ಎಂದು ಕುಟುಕಿದ್ದಾರೆ.
ಅದೇ ರೀತಿ ಎಚ್.ಡಿ. ದೇವೇಗೌಡರೂ ತೃತೀಯರಂಗ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು. ಅದರಲ್ಲಿ ತಪ್ಪೇನೂ ಇಲ್ಲ. ಅದು ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ರಾಜಕಾರಣಿಯೂ ಆಡುವ ಸಹಜ ಮಾತು. ಆದರೆ ತಾವು ಸರ್ವಜ್ಞ ಎಂಬಂತೆ ಮಾತನಾಡಿರುವ ಶಿವರಾಂ ಅಪ್ರಬುದ್ಧ ರಾಜಕಾರಣಿ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದು ಚನ್ನವೀರಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

