ಹಾವೇರಿ

ಇಂದಿನಿಂದ ವಿವಿಧ ಧಾರ್ಮಿಕ ಆಚರಣೆ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಏ. 1
ವಿಶ್ವಗುರು ಬಸವೇಶ್ವರರ ಜಯಂತಿ ಆಚರಣೆಯ ಶತಮಾನೋತ್ಸವ ಹಾಗೂ ಜಗನ್ಮಾತೆ ಅಕ್ಕಮಹಾದೇವಿ ಜಯಂತಿ ಆಚರಣೆಯ ವಜ್ರಮಹೋತ್ಸವ ನಿಮಿತ್ತ ಏ. 2ರಿಂದ 6ರ ವರೆಗೆ ನಗರದ ಎಸ್‌ಜೆಎಂ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ವಿವಿಧ ಧಾರ್ಮಿಕ ಆಚರಣೆ ಕಾರ್ಯಕ್ರಮಗಳನ್ನು ನಡೆಸಲು ತಿರ್ಮಾನಿಸಿರುವುದಾಗಿ ತಾಲೂಕು ಶರಣ ಸಂಸ್ಕೃತಿ ಉತ್ಸವ ಹಾಗೂ ಅಕ್ಕನ ಬಳಗದ ಅಧ್ಯಕ್ಷೆ ಸುವರ್ಣದೇವಿ ಪಾಟೀಲ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಹಾಗೂ ಬಸವೇಶ್ವರರ ಜಯಂತ್ಯುತ್ಸವ ಆಚರಣೆಯ ಶತಮಾನೋತ್ಸವ ಸವಿನೆನಪಿಗಾಗಿ, ತಾಲೂಕಿನ ಎಲ್ಲಾ ಜಾತಿ ಜನಾಂಗದ ಶರಣ ಬಂಧುಗಳ ಸಹಕಾರದಿಂದ ಏ. 2ರಿಂದ 5ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಏ. 6ರಂದು ಮುಕ್ತಾಯ ಕಾರ್ಯಕ್ರಮ ನಡೆಸಲು ತಿರ್ಮಾನಿಸಲಾಗಿದೆ.
ಏ. 6ರಂದು ನಡೆಯಲಿರುವ ಮುಕ್ತಾಯ ಕಾರ್ಯಕ್ರಮಕ್ಕೆ ಚಿತ್ರದುರ್ಗದ ಶಿವಮೂರ್ತಿ ಮುರುಘಾಶರಣರು, ಲಿಂಗನಾಯಕನಹಳ್ಳಿಯ ಶಾಂತಲಿಂಗ ಶ್ರೀಗಳು ಆಗಮಿಸುವರು.
ವಾಸುದೇವ ಲದ್ವಾ ಕಾರ್ಯಕ್ರಮ ಉದ್ಘಾಟಿಸುವರು. ನಂಜನಗೂಡಿನ ಸಾಹಿತಿ ಕಾ.ಸು. ನಂಜಪ್ಪ, ಪೌರಾಯುಕ್ತ ಕರಭೀಮಣ್ಣನವರ, ಬೈಲಹೂಂಗಲದ ಪ್ರೇಮಕ್ಕ ಅಂಗಡಿ ಆಗಮಿಸುವರು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.