ಬಿಎಸ್ವೈಯಿಂದ ಜನರಿಗೆ ಸೂಕ್ತ ಸೌಲಭ್ಯ
ಬ್ಯಾಡಗಿ: ಮುಖ್ಯಮಂತ್ರಿಯಾಗಿದ್ದ ಬಿಎಸ್ವೈ ತಮ್ಮ ಮೂರೂವರೆ ವರ್ಷದ ಅಧಿಕಾರದವಧಿಯಲ್ಲಿ ರಾಜ್ಯದ ಒಂದುವರೆ ಕೋಟಿ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಹೇಳಿದರು.
ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ಚುನಾವಣಾ ಪ್ರಚಾರಾರ್ಥ ಏರ್ಪಡಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಬಿಎಸ್ವೈ ಅಧಿಕಾರದಲ್ಲಿದ್ದಾಗ ಅಭಿವೃದ್ಧಿಯಲ್ಲಿ ರಾಜ್ಯವನ್ನು 2ನೇ ಸ್ಥಾನಕ್ಕೆ ಕೊಂಡೊಯ್ದಿದ್ದರು ಬಡ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್, ವೃದ್ಧಾಪ್ಯ ವೇತನ, ಭಾಗ್ಯಲಕ್ಷ್ಮೀ ಬಾಂಡ್ ಸೇರಿದಂತೆ ರೈತರ ಬಡ್ಡಿಮನ್ನಾ ಮಾಡುವ ಮೂಲಕ ಅಭಿವೃದ್ಧಿ ಹರಿಕಾರ ಎನಿಸಿಕೊಂಡಿದ್ದಾರೆ. ಜಿಲ್ಲೆಯ ವಿಚಾರಕ್ಕೆ ಬಂದಾಗ ಈಗಾಗಲೇ 3 ಏತ ನೀರಾವರಿ ಯೋಜನೆಗಳಿಗೆ ಅನುದಾನ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ ರು. 40 ಕೋಟಿ ಹಾಗೂ ತುಂಗಾ ಮೇಲ್ದಂಡೆ ಯೋಜನೆಗೆ ರು. 900 ಕೋಟಿ ವೆಚ್ಚದಲ್ಲಿ ಒದಗಿಸಿ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದರು.
ಬಿಜೆಪಿಯಿಂದ ಮೋಸ: ಕೆಜೆಪಿ ಜಿಲ್ಲಾಧ್ಯಕ್ಷ ಮೈಲಪ್ಪ ಗುಡಗೂರ ಮಾತನಾಡಿ, ಅಧಿಕಾರದಾಸೆಗಾಗಿ ಇಂದು ಬಿಎಸ್ವೈ ಅವರನ್ನು ಮೋಸದಿಂದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು. ಇಂತಹ ಕುತಂತ್ರ ರಾಜಕೀಯ ನಡೆಸಿಯೇ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವ ಕನಸು ಫಲಿಸಲು ಸಾಧ್ಯವಿಲ್ಲ ಎಂದರು.
ಪ್ರಾದೇಶಿಕ ಪಕ್ಷಗಳಿಂದ ಅಭಿವೃದ್ಧಿ: ತಾಲೂಕು ಘಟಕದ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ್ ಮಾತನಾಡಿ, ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್ ಸಂಸ್ಕೃತಿಯಿಂದ ರಾಜ್ಯದ ಅಭಿವೃದ್ಧಿ ಮರಿಚೀಕೆಯಾಗಲಿದೆ. ಪ್ರಾದೇಶಿಕ ಪಕ್ಷಗಳ ಅನಿವಾರ್ಯತೆ ಹಾಗೂ ನಂಬಿಕೆ ದ್ರೋಹಗಳಿಂದ ಬೇಸತ್ತ ಬಿಎಸ್ವೈ ಕರ್ನಾಟಕ ಜನತಾ ಪಕ್ಷ ಸ್ಥಾಪಿಸಿದ್ದು, ಎಲ್ಲ ವರ್ಗದ ಜನರು ಬೆಂಬಲಿಸುವಂತೆ ಕರೆ ನೀಡಿದರು.
ಪೂಜೆ ಸಲ್ಲಿಸಿ ಪ್ರಚಾರ ಆರಂಭ: ಇದಕ್ಕೂ ಮುನ್ನ ಸುಪ್ರಸಿದ್ಧ ಶ್ರೀ ಕಾಂತೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕೆಜೆಪಿ ಕಾರ್ಯಕರ್ತರು ಬಳಿಕ ಗ್ರಾಮದಲ್ಲಿ ರೋಡ್ ಶೋದೊಂದಿಗೆ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಕೆಜೆಪಿ ನಗರ ಘಟಕದ ಅಧ್ಯಕ್ಷ ಗಂಗಣ್ಣ ಎಲಿ, ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತಪ್ಪ ನಾಯ್ಕರ್, ಜಿಪಂ ಸದಸ್ಯರಾದ ರಾಜೇಂದ್ರ ಹಾವೇರಣ್ಣನವರ, ಶಿವಕುಮಾರ ಮುದ್ದಪ್ಪಳವರ, ಎಪಿಎಂಸಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಮಾಜಿ ಅಧ್ಯಕ್ಷ ಕನ್ನಪ್ಪ ಕೊಪ್ಪದ, ಸದಸ್ಯ ಹಾಲೇಶ್ ಬ್ಯಾಡಗಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸುರೇಶ್ ಯತ್ನಳ್ಳಿ ಪುರಸಭೆ ಸದಸ್ಯರಾದ ಬಸವರಾಜ ಛತ್ರದ, ಪ್ರಶಾಂತ್ ಯಾದವಾಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

