ಹಾವೇರಿ

ಸೇವಾ ಮನೋಭಾವ ನಿರಂತರವಿರಲಿ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಏ. 2
ಸಮಾಜ ಪೊಲೀಸ್ ಇಲಾಖೆ ಮೇಲೆ ಇಟ್ಟಿರುವ ಗೌರವ ಉಳಿಸಿಕೊಂಡು ಹೋಗುವತ್ತ ಪ್ರಯತ್ನ ನಿರಂತವಾಗಿರಬೇಕೆಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ನುಡಿದರು.
ಇಲ್ಲಿನ ಕೆರಿಮತ್ತಿಹಳ್ಳಿಯ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಎಲ್ಲರ ಕುಟುಂಬದಂತಿರಲಿ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಸಮಾಜದಲ್ಲಿ ಎಲ್ಲರಂತೆ ಪೊಲೀಸರ ಕುಟುಂಬಗಳು ಸಾಗುವಂತೆ ನೋಡಿಕೊಳ್ಳಬೇಕೆಂದರು.
ಪೊಲೀಸ್ ಕಲ್ಯಾಣ ನಿಧಿಯಲ್ಲಿರುವ ಮೊತ್ತ ವಿನಿಯೋಗಿಸುವಾಗ ಶಿಕ್ಷಣಕ್ಕೆ ಸಿಂಹಪಾಲನ್ನು ಮೀಸಲಿಡುವಂತೆ ಸೂಚಿಸಿದ ಅವರು, ಈ ನಿಧಿಯಿಂದ ಅತಂತ್ರ ಸ್ಥಿತಿಯಲ್ಲಿರುವ ಪೊಲೀಸರ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗಲಿ ಎಂದರು.
ಕುಟುಂಬದತ್ತ ಗಮನವಿರಲಿ: ಇನ್ನೋರ್ವ ಅತಿಥಿ ನಿವೃತ್ತ ಪೊಲೀಸ್ ಉಪ ಅಧೀಕ್ಷಕ ವಿ.ಎ. ಪೂಜಾರ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ತಮ್ಮ ಆರೋಗ್ಯದ ಕಡೆ ಗಮನ ನೀಡಬೇಕು. ಅದೇ ರೀತಿ ಕುಟುಂಬದ ಆಗು-ಹೋಗುಗಳ ಕುರಿತು ಕಾಳಜಿವಹಿಸುವಂತೆ ತಿಳಿಸಿದರು.
ದಕ್ಷ, ಪ್ರಾಮಾಣಿಕತೆ ಇರಲಿ: ಮೇಲಾಧಿಕಾರಿಗಳ ಸೂಚನೆ, ಸಾರ್ವಜನಿಕರ ಸಹಕಾರ ಪಡೆದು ದೈನಂದಿನ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ದಿನನಿತ್ಯದ ಕರ್ತವ್ಯ ನಿರ್ವಹಣೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆ ಮೈಗೂಡಿಸಿಕೊಂಡು ಉತ್ತಮ ಸೇವೆಗೆ ಬದ್ಧರಾಗಿ ಕರ್ತವ್ಯ ನಿರ್ವಹಿಸಿದರೆ ಉತ್ತಮ ಸಾಧನೆ ಮಾಡಬಹುದೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ, ಚೇತನಸಿಂಗ್ ರಾಠೋರ, ವಾರ್ಷಿಕ ವರದಿ ವಾಚನ ಮಾಡಿದರು. ಪೊಲೀಸ್ ಉಪ ಅಧೀಕ್ಷಕ ಸಿ.ಸಿ. ಪಾಟೀಲ ಸ್ವಾಗತಿಸಿದರು. ಜಯಪ್ರಕಾಶ ಅಕ್ಕರಕಿ ವಂದಿಸಿದರು. ಇದಕ್ಕೂ ಮುನ್ನ ಪೊಲೀಸ್ ಕಮಾಂಡರ್ ಮಲ್ಲಿಕಾರ್ಜುನ ಮುರೋಳ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ಜರುಗಿತು.
ಇದೇ ಸಂದರ್ಭ ನಿವೃತ್ತ ಪೊಲೀಸ್ ಅಧಿಕಾರಿಗಳಾದ ವಿ.ಎ. ಪೂಜಾರ, ಎಸ್.ಪಿ. ಹುಲ್ಲೂರ, ಎ.ಬಿ. ಓಲೇಕಾರ, ಡಿ.ಎಚ್. ಡೊಂಬರ ಹಾಗೂ ಪಿ.ಬಿ. ಬಿದರಿ ಅವರನ್ನು ಜಿಲ್ಲಾಧಿಕಾರಿಗಳು ಶಾಲು ಹೊದಿಸಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳಾದ ಸಿದ್ಧಾರೂಢ ಬಡಿಗೇರ, ಈರವ್ವ ಚಿಕ್ಕೇರಿ, ಸಂತೋಷ್ ಪಾಟೀಲ, ಮಹಾಂತೇಶ, ಜಿ.ಸಿ. ಡೊಣ್ಣನವರ, ಗಣಪತಿ, ಸಿಪಿಐ ಪಂಪಾಪತಿ, ಮುರುಘೇಂದ್ರಯ್ಯ ಇನ್ನಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.