ಕ್ಷುಲ್ಲಕ ಕಾರಣಕ್ಕೆ ಜಗಳ: ಬಂದೋಬಸ್ತ್
ಹಿರೇಕೆರೂರು: ತಾಲೂಕಿನ ರಟ್ಟೀಹಳ್ಳಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಹಂತದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ರಟ್ಟೀಹಳ್ಳಿ ಬಂದ್ ಆಗುವಂತೆ ಮಾಡಿತು.
ಹಾನಿ: ಬುಧವಾರ ಸಂಜೆ 5.30ಕ್ಕೆ ಮೈದಾನದಲ್ಲಿ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಆಟಗಾರರ ಮಧ್ಯೆ ಪ್ರಾರಂಭವಾದ ಜಗಳದಲ್ಲಿ ಹಳೆ ಬಸ್ ನಿಲ್ದಾಣದಲ್ಲಿ ವಿಕೋಪಕ್ಕೆ ತಿರುಗಿದ ಕಾರಣ ಕಲ್ಲು ತೂರಾಟ ನಡೆಯಿತು. ಅಲ್ಲದೇ ಎರಡು ಅಂಗಡಿಗಳನ್ನು ಜಖಂಗೊಳಿಸಲಾಗಿದೆ. ಸಿದ್ದು ಕಟಿಂಗ್ ಶಾಪ್ ಹಾಗೂ ಎಲ್ಲಪ್ಪ ಅಡಿಕೆ ಅಂಗಡಿ ಹಾನಿಗೊಳಿಸಲಾಗಿದೆ.
ಘಟನೆ ನಡೆದ ಕೆಲವೆ ನಿಮಿಷದಲ್ಲಿ ಸ್ಥಳಕ್ಕಾಗಮಿಸಿದ ಸಿಪಿಐ ವಿಜಯ ಮುರಗುಂಡಿ ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಘಟನೆ ಹಿನ್ನಲೆಯಲ್ಲಿ ತಡರಾತ್ರಿವರೆಗೂ ಪ್ರಕರಣ ದಾಖಲಾಗಿರಲಿಲ್ಲ. ವ್ಯಾಪಾರಸ್ಥರು ಭಯ ಭೀತಿಯಿಂದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿದರು. ಇದರಿಂದಾಗಿ ಪಟ್ಟಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಯಿತು. ಸದ್ಯ ಪರಿಸ್ಥಿತಿ ಶಾಂತವಾಗಿದೆ. ಪೊಲೀಸ್,ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟು ಬಂದೋಬಸ್ತ್ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

