ಹಾವೇರಿ

ಡಾ. ಜಗಜೀವನರಾಂ ಆದರ್ಶ ಪಾಲಿಸಿ

Published On :

ಹಾನಗಲ್ಲ: ಭಾರತ ಕಂಡ ಅತ್ಯಂತ ಸರಳ, ಸಜ್ಜನಿಕೆ ವ್ಯಕ್ತಿ ಮಾಜಿ ಉಪಪ್ರಧಾನಿ ದಿ. ಡಾ. ಬಾಬು ಜಗಜೀವನರಾಂ ಎಂದು ತಹಸೀಲ್ದಾರ್ ಡಾ. ನಾಗೇಂದ್ರ ಹೊನ್ನಳ್ಳಿ ಅಭಿಪ್ರಾಯಪಟ್ಟರು.
ಹಾನಗಲ್ಲ ತಾಲೂಕಾಡಳಿತ ಏರ್ಪಡಿಸಿದ್ದ ಡಾ. ಬಾಬು ಜಗಜೀವನರಾಂ 106ನೇ ಜನ್ಮದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಹೊನ್ನಳ್ಳಿ, ಮೌಲ್ಯಯುತ, ಪಾರದರ್ಶಕ ವ್ಯಕ್ತಿತ್ವ ಹೊಂದಿದ್ದ ಡಾ. ಜಗಜೀವನರಾಂ ಅವರು ಸಮಾಜದ ಉದ್ಧಾರಕ್ಕಾಗಿ ಬದುಕಿದ ಅವರ ಆದರ್ಶ, ತ್ಯಾಗ, ಸಮಾಜಮುಖಿ ಕಾರ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಈಗ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.
ವಿವಿಧ ಇಲಾಖೆ ಅಧಿಕಾರಿಗಳಾದ ಬಿ.ವೈ. ಬಂಡಿವಡ್ಡರ, ಡಾ. ಚಂದ್ರಪ್ಪ ನರಸಗೊಂಡರ, ಕೆ.ಆರ್. ಮಠದ, ಮನೋಜಕುಮಾರ ಗಡಬಳ್ಳಿ, ಪಿ.ಎಂ. ಮಾಳದಕರ, ಸಿ.ಎನ್. ಕುರೇರ, ಸಿದ್ದು ಕುಂಬಾರ, ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ನಿಂಗಪ್ಪ ಗಾಳೆಮ್ಮನವರ, ನಿಂಗಪ್ಪ ಕಾಳೇರ, ದೇವೇಂದ್ರಪ್ಪ ತಳವಾರ, ಫಕ್ಕೀರಪ್ಪ ಕಾಳೇರ, ಅಜ್ಜಯ್ಯ ಸವಣೂರು, ಪರಮೇಶ್ವರ ಬಿ.ಜಿ., ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.