ಪಾಟೀಲ್ ಗೆಲ್ಲಲೆಂದು ಕಾಯಿ ಕಟ್ಟಿದರು!
ರೋಣ: ರೋಣ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉತ್ಸುಕರಾಗಿರುವ ಮಾಜಿ ಶಾಸಕ ಜಿ.ಎಸ್. ಪಾಟೀಲ್ ಬಹುಮತದಿಂದ ಗೆಲುವು ಸಾಧಿಸಬೇಕು ಎಂದು ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಶುಕ್ರವಾರ ತಾಲೂಕಿನ ಇಟಗಿ ಭೀಮಾಂಬಿಕಾ ದೇವಿ ಗುಡಿಗೆ ತೆರಳಿ ದೇವಿಯ ಗದ್ದುಗೆಗೆ ಕಾಯಿ ಕಟ್ಟುವ ಮೂಲಕ ಹರಕೆ ಹೊತ್ತಿದ್ದಾರೆ. ಪುರಸಭೆ ಮಾಜಿ ಸದಸ್ಯ ಕೆ.ಕೆ. ಮುಲ್ಲಾ ಮತ್ತು ಸುರೇಶ ಜಗ್ಗಲ ಮಾತನಾಡಿ, ರೋಣ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಜಿ ಶಾಸಕ ಜಿ.ಎಸ್. ಪಾಟೀಲರಿಂದ ಮಾತ್ರ ಸಾಧ್ಯ. ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿದ್ದಾರೆ. ಎಸ್.ಆರ್. ಪ್ರತಿಷ್ಠಾನದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಸೋಲಾರ್ ದೀಪ ವಿತರಣೆ, ಅಲ್ಲಲ್ಲಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪನೆ, ಉಚಿತ ಕಂಪ್ಯೂಟರ್ ಮತ್ತು ಹೊಲಿಗೆ ತರಬೇತಿ, ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಕ್ರೀಡೆಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದಾರೆ ಎಂದರು. ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಪ್ರಭು ಮೇಟಿ, ವಿ.ಬಿ. ಸೋಮನಕಟ್ಟಿಮಠ, ಮಲ್ಲನಗೌಡ ರಾಯನಗೌಡ್ರ, ಇಸ್ಮಾಯಿಲ್ ಹೊರಪೇಟಿ, ಗ್ರಾಪಂ ಸದಸ್ಯ ಮಲ್ಲಪ್ಪ ಬಿಳೇಕಲ್, ಯಮನೂರಪ್ಪ ವಡಗೇರಿ, ಪರಪ್ಪ ಕೋಮಾರ, ಮಲ್ಲಿಕಾರ್ಜುನ ಕೋಮಾರ, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

