ಹಾವೇರಿ

ನಮ್ಮ ಪರಂಪರೆ ಉಳಿಸಿ, ಬೆಳೆಸಿ

Published On :

ಹಿರೇಕೆರೂರು: ನಮ್ಮ ಪರಂಪರೆ, ಇತಿಹಾಸ, ನೈಸರ್ಗಿಕ ಸಂಪನ್ಮೂಲ ಹಾಗೂ ಜನಪದ ಭವ್ಯ ಪರಂಪರೆ ಮೊದಲಾದ ವಿಷಯಗಳನ್ನು ತಿಳಿಯುವುದರೊಂದಿಗೆ ಮುಂದಿನ ಪೀಳಿಗೆಗೆ ಉಳಿಸಬೇಕಿದೆ ಎಂದು ಪರಂಪರೆ ಕೂಟದ ಸಂಚಾಲಕ ಪ್ರೊ. ಎಸ್.ಪಿ. ಗೌಡರ ತಿಳಿಸಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜು ಹಾಗೂ ಪ್ರಾಚ್ಯವಸ್ತು ಸಂಗ್ರಾಹಲಯ ಮತ್ತು ಪರಂಪರೆ ಇಲಾಖೆ ಮೈಸೂರು ಸಹಯೋಗದಲ್ಲಿರುವ ಕಾಲೇಜು ಪರಂಪರೆ ಕೂಟದ ವತಿಯಿಂದ ಆಯ್ದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಐತಿಹಾಸಿಕ ಹಾಗೂ  ನೈಸರ್ಗಿಕ ಪರಂಪರೆ ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ಉಪನ್ಯಾಸಕಿ ಭುವನೇಶ್ವರಿ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿಗಳು ಬಳ್ಳಗಾವಿ, ತಾಳಗುಂದ, ಕೆಳದಿ, ಬನವಾಸಿ ಕೋಟೆಪುರದ ಪ್ರಾಚೀನ ದೇವಾಲಯಗಳಲ್ಲಿರುವ ಕಲೆ, ವಾಸ್ತು ಶಿಲ್ಪ ಮೊದಲಾದವನ್ನು ವೀಕ್ಷಿಸಿ, ಮಾಹಿತಿ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.