ಬಿಜೆಪಿಗೆ ಮೂರನೇ ಸ್ಥಾನ: ಸಜ್ಜನರ ಭವಿಷ್ಯ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 6
ಬಿಎಸ್ವೈಗೆ ಅನ್ಯಾಯವೆಸಗಿದ ಬಿಜೆಪಿ ಈ ಚುನಾವಣೆಯಲ್ಲಿ 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಲಿದೆ ಎಂದು ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಭವಿಷ್ಯ ನುಡಿದರು.
ಶುಕ್ರವಾರ ತಾಲೂಕಿನ ಬುಡಪನಹಳ್ಳಿ, ಕಲ್ಲೇದೇವರ ಹಾಗೂ ಅಳಲಗೇರಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.
ರಾಜ್ಯದ ನೆಲ, ಜಲ, ಭಾಷೆ ಹಾಗೂ ಸಮಗ್ರ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದ ಆವಶ್ಯಕತೆಯಿದೆ. ಸೂಕ್ತ ನಾಯಕರಿಲ್ಲದೆ ಅಸ್ತಿತ್ವ ಕಳೆದುಕೊಂಡಿರುವ ಬಿಜೆಪಿಗೆ ಈ ಚುನಾವಣೆಯಲ್ಲಿ ಜನತೆ ತಕ್ಕ ಉತ್ತರ ನೀಡಲಿದ್ದಾರೆ, ಕೆಜೆಪಿಯನ್ನು ಗೆಲ್ಲಿಸುವ ತವಕದಲ್ಲಿದ್ದಾರೆ ಎಂದರು. ಮುಖ್ಯಮಂತ್ರಿಯಾಗಿ ಮೂರುವರೆ ವರ್ಷ ರಾಜ್ಯದಲ್ಲಿ ನೀಡಿದ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳು ಇಂದಿಗೂ ಮತದಾರರ ಮನದಲ್ಲಿವೆ.
ಬಿಎಸ್ವೈ ಸಾಧನೆಯನ್ನು ಹಾಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮದೆಂದು ಹೇಳಿಕೊಳ್ಳುತ್ತ ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅಭಿವೃದ್ಧಿ ಹರಿಕಾರ ಬಿಎಸ್ವೈ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷ ಕೆಜೆಪಿ ಈ ಬಾರಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕು ಕೆಜೆಪಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ರು. 700 ಕೋಟಿ ಅನುದಾನ ಒದಗಿಸಿದ ಕೀರ್ತಿ ಬಿಎಸ್ವೈಗೆ ಸಲ್ಲುತ್ತದೆ. ತಾಲೂಕಿನಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕಿದ್ದು, ಮತದಾರರು ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ಅವರನ್ನು ಬೆಂಬಲಿಸಿ ಯಡಿಯೂರಪ್ಪ ಕೈ ಬಲಪಡಿಸುವಂತೆ ಮನವಿ ಮಾಡಿದರು.
ತಾಪಂ ಅಧ್ಯಕ್ಷ ನಾಗರಾಜ ಬಳ್ಳಾರಿ, ಶಿವಬಸಪ್ಪ ಕುಳೇನೂರ, ಗಂಗಣ್ಣ ಯಲಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸುರೇಶ ಯತ್ನಳ್ಳಿ, ವೀರನಗೌಡ ಪಾಟೀಲ, ಕುಲಕರ್ಣಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

