ರಾಣಿಬೆನ್ನೂರು: 233 ಮತಗಟ್ಟೆಗಳು
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಏ. 6
ಮೇ. 5ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರ ಹಾಗೂ 78 ಹಳ್ಳಿಗಳಲ್ಲಿ 233 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾನದ ಪ್ರಮಾಣ ಹೇಚ್ಚಳಕ್ಕಾಗಿ ತಾಲೂಕಾದ್ಯಂತ ಜಾಗೃತಿ ಜಾಥಾ ನಡೆಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಬಸನಗೌಡ ತಿಳಿಸಿದರು.
ಶನಿವಾರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕರೆದಿದ್ದ ಚುನಾವಣಾ ಜಾಗೃತಿ ಸಭೆಯಲ್ಲಿ ಮಾತನಾಡಿ, ಮೇ 5ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವವರು ಏ. 10ರಿಂದ 17ರ ವರೆಗೆ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ಒಳಗಾಗಿ ನಾಮಪತ್ರ ಸಲ್ಲಿಸಬೇಕು.
18ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದಕ್ಕೆ ಪಡೆಯಲು ಏ. 20 ಕೊನೆ ದಿನವಾಗಿದೆ.
ಮೇ 5ರಂದು ಬೆಳಗ್ಗೆ 7 ಗಂಟೆಯ ಬದಲಾಗಿ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತಧಾನ ನಡೆಸಲು ನಿರ್ಧರಿಸಿದ್ದು,ಸಮಯವನ್ನು ಬದಲಾಯಿಸಿ ಈ ಹಿಂದೆ ಇದ್ದ ಸಮಯದಂತೆಯೇ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭಿಸಲು ಯಾವುದೇ ಸುತ್ತೊಲೆ ಹಾಗೂ ಆದೇಶ ಬಂದಿಲ್ಲ ಅಷ್ಟರೊಳಗಾಗಿ ಆದೇಶ ಬಂದಲ್ಲಿ ಬೆಳಗ್ಗೆ 7ರಿಂದಲೇ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ.
ಚುನಾವಣೆ ಪ್ರಚಾರ ಸಮಯದಲ್ಲಿ ಅಭ್ಯರ್ಥಿಗಳು ನಡೆಸುವ ಎಲ್ಲಾ ರೀತಿಯ ಚಟುವಟಿಕೆ ಗಮನಿಸುವುದಕ್ಕಾಗಿ ತಾಲೂಕಿನ 3 ಹೋಬಳಿಗಳಾದ ಮೇಡ್ಲೇರಿ, ಕುಪ್ಪೇಲೂರು ಹಾಗೂ ರಾಣಿಬೆನ್ನೂರು ಗ್ರಾಮಾಂತರ ಪ್ರದೇಶದಲ್ಲಿ ದಿನದ 24 ಗಂಟೆಗಳಲ್ಲಿ ಜಾಗೃತ ದಳದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೆ 12 ಪ್ರಕರಣಗಳನ್ನು ದಾಖಲಿಸಲಾಗಿದೆ.
ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಹಾಗೂ ನಿರ್ಬೀತಿಯಿಂದ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವಂತಹ ವಾತಾವರಣವನ್ನು ತಾಲೂಕಾದ್ಯಂತ ನಿರ್ಮಿಸಲಾಗುವುದು.
ಮತದಾರರ ಒಲೈಕೆಗಾಗಿ ರಾಜಕೀಯ ಪಕ್ಷದವರಾಗಲಿ, ಪಕ್ಷೇತರ ಅಭ್ಯರ್ಥಿಗಳಾಗಲಿ ಯಾವುದೇ ಅಕ್ರಮ ವ್ಯವಹಾರದಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ತಹಸೀಲ್ದಾರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಜಾಗೃತ ದಳದ ದೂರವಾಣಿ ಸಂಖ್ಯೆ-08373-266450, ಮೊ- 9480868004ಗೆ ಸಂಪರ್ಕಿಸಿ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಬಸನಗೌಡ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

