ಹಾವೇರಿ

ಕೊಟ್ಟ ಮಾತಿನಂತೆ ಸ್ಥಾನ ಬಿಟ್ಟು ಕೊಟ್ಟಿದ್ದೇನೆ: ಸುರೇಶಗೌಡ

Published On :

ಬ್ಯಾಡಗಿ: ಕೊಟ್ಟ ಮಾತಿನಂತೆ ಶಿವರಾಜ ಸಜ್ಜನರ ಅವರಿಗೆ ಸ್ಥಾನ ತ್ಯಾಗ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಬೇರೆ ಪಕ್ಷದ ಕಡೆಗೆ ಮುಖ ಮಾಡುವುದಿಲ್ಲ ಎಂದು ಹೇಳುವ ಮೂಲಕ ಕಳೆದ 15 ದಿನಗಳಿಂದ ಬೇರೆ ಪಕ್ಷಗಳಿಗೆ ಬೆಂಬಲ ಸೂಚಿಸುವ ಕುರಿತು ಹರದಾಡುತ್ತಿದ್ದ ಎಲ್ಲ ಊಹಾಪೋಹಗಳಿಗೆ ಮಾಜಿ ಶಾಸಕ ಸುರೇಶಗೌಡ ಪಾಟೀಲ ತೆರೆ ಎಳೆದರು.
ಪಟ್ಟಣದಲ್ಲಿ ಭಾನುವಾರ ಜರುಗಿದ ಕೆಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆ ಬಿ ಫಾರಂ ನೀಡಿದ್ದ ಶಿವರಾಜ ಸಜ್ಜನರ್‌ಗೆ ಇಚ್ಛೆಯಂತೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೇ ನನ್ನ ಗೆಲುವಿಗೆ ಶ್ರಮಿಸಿದ್ದರು. ಹೀಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ತಿರ್ಮಾನ ತೆಗೆದುಕೊಂಡಿದ್ದಾಗಿ ತಿಳಿಸಿದರು.
ಪ್ರಚಾರಕ್ಕೆ ಸಿದ್ಧ: ಕರ್ನಾಟಕ ಜನತಾ ಪಕ್ಷಕ್ಕೆ ತವರು ಜಿಲ್ಲೆಯಾಗಿರುವ ಹಾವೇರಿಯಲ್ಲಿ ಉತ್ತಮ ಬೆಂಬಲ ದೊರೆಯಬೇಕೆಂಬ ಉದ್ದೇಶದಿಂದ ಕೆಜೆಪಿ ಪಕ್ಷ ಬೆಂಬಲಿಸಬೇಕಾಗಿದೆ. ಹೀಗಾಗಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಯನ್ನು ಬೆಂಬಲಿಸಿ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದೇನೆ ಎಂದರು.
ಅಭಿವೃದ್ಧಿಯೇ ಶ್ರೀರಕ್ಷೆ: ಮಾಜಿ ಮುಖ್ಯಮಂತ್ರಿ ಬಿಎಸ್‌ವೈಗೆ ನಿಷ್ಠೆ ತೋರಿಸಿ ಅವಧಿಗೂ ಮುನ್ನವೇ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೆ, ಬಿಎಸ್‌ವೈ ಅವರ ಶ್ರೀರಕ್ಷೆಯಿಂದ ಇಂದು ಬ್ಯಾಡಗಿ ಕ್ಷೇತ್ರ ಅಭಿವೃದ್ಧಿಗೆ ರು. 700 ಕೋಟಿ ಅನುದಾನ ಪಡೆಯಲು ಶಕ್ತವಾಯಿತು. ಹೀಗಾಗಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳು ಶಿವರಾಜ ಸಜ್ಜನರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.