ಹಾವೇರಿ

ನಾಳೆ ಕೆಜೆಪಿ ಸಭೆ

Published On :

ಹಾನಗಲ್ಲ: ಕರ್ನಾಟಕ ಜನತಾ ಪಕ್ಷದ ಹಾನಗಲ್ಲ ತಾಲೂಕು ಕಾರ್ಯಕರ್ತರ ಸಭೆ ಏ. 9ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಉದಾಸಿ ಸಾವಿತ್ರಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಪಕ್ಷದ ತಾಲೂಕಾಧ್ಯಕ್ಷ ಎಂ.ಆರ್. ಪಾಟೀಲ ಅಧ್ಯಕ್ಷತೆ ವಹಿಸುವರು. ವಿಧಾನಸಭೆ ಚುನಾವಣೆ ಕುರಿತು ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಸಿ.ಎಂ. ಉದಾಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಪಕ್ಷದ ಎಲ್ಲ ಘಟಕಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ-ಸೂಚನೆ ನೀಡಬೇಕೆಂದು ಪಕ್ಷದ ಕಾರ್ಯಾಲಯ ಕಾರ್ಯದರ್ಶಿ ನಾಗರಾಜ ಕರೆಣ್ಣನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

14ರಂದು ಅಂಬೇಡ್ಕರ್, ಬಾಬೂಜಿ ಜಯಂತಿ
ಹಾನಗಲ್ಲ:
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಭೀಮಶಕ್ತಿ ಕೇಂದ್ರದ ಪದಾಧಿಕಾರಿಗಳ ಸಭೆ ತಾಲೂಕಿನ ನಾಲ್ಕರ ಕ್ರಾಸ್ ಸಮೀಪದ ಭೂತೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಸಂಚಾಲಕ ನಿಂಗಪ್ಪ ಗಾಳೆಮ್ಮನವರ ಅಧ್ಯಕ್ಷತೆ ವಹಿಸಿದ್ದರು. ಏ. 14ರಂದು ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಯಿತು. ನಿಂಗಪ್ಪ ಗಾಳೆಮ್ಮನವರ, ತಾಲೂಕು ಸಂಚಾಲಕ ಫಕ್ಕೀರಪ್ಪ ಕಾಳೇರ ಮಾತನಾಡಿ, ತಾಲೂಕಿನಲ್ಲಿ ಪರಿಶಿಷ್ಟ ಜಾತಿ-ವರ್ಗದ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಸಮಿತಿ ಎಲ್ಲ ಉಪಜಾತಿಯವರಿಗೆ ಯೋಗ್ಯ ಸ್ಥಾನಮಾನ ಸಿಗುವಂತೆ ಪ್ರಾಮಾಣಿಕ ಹೋರಾಟ ನಡೆಸುತ್ತ ಬಂದ ಕಾರಣ ದಲಿತ ಸಮುದಾಯ ಜಾಗೃತಗೊಂಡಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.