ಮತಾಧಿಕಾರವೇ ಜನಾಧಿಕಾರ
ಕನ್ನಡಪ್ರಭ ವಾರ್ತೆ, ಹಾವೇರಿ, ಏ. 8
ಮತಾಧಿಕಾರವೇ ಜನಾಧಿಕಾರವಾಗಿದ್ದು, ಮತದಾರರು ಜಾಗೃತರಾಗಿ ಮತಚಲಾಯಿಸಬೇಕು, 18 ವರ್ಷ ಪೂರ್ಣಗೊಳಿಸಿದ ಎಲ್ಲಾ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡು ಮತದಾನದ ಹಕ್ಕನ್ನು ಪಡೆಯಬೇಕೆಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎಸ್.ಸಿ. ತಿರ್ಲಾಪೂರ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಆಶ್ರಯದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿನಿಯರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ಏ. 5ರಂದು ನಗರದ ದೇವರಾಜ ಅರಸು ಸಭಾಭವನದಲ್ಲಿ ಜರುಗಿತು.
ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಜಗದೀಶ ಎಸ್. ಹೆಬ್ಬಳ್ಳಿ ಮಾತನಾಡಿ, ಮತದಾನ ಜಾಗೃತಿ ಹಾಗೂ ನೈತಿಕ ಮತದಾನದ ಬಗ್ಗೆ ಪ್ರಾಸ್ತಾವಿಕ ಮಾನಾಡಿದರು.
ಇದೇ ಸಂದರ್ಭ ಜಿಲ್ಲಾ ಹಿಂದುಳಿದ ವಗಗಳ ಅಧಿಕಾರಿ ಮಲ್ಲೇಶಪ್ಪ ಹೊರಪೇಟಿ ಅವರು ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ,ಐ.ಎನ್. ಲೋಕಾಪುರ, ವಿದ್ಯಾರ್ಥಿಗಳು ಜಾಗೃತರಾಗಿ ತಮ್ಮ ಪಾಲಕರಿಗೆ ಮತದಾನದ ಜಾಗೃತಿ ಬಗ್ಗೆ ಅರಿವು ಮೂಡಿಸಿ, ಉತ್ತಮ ಪ್ರಜಾಪ್ರಭುತ್ವ ನಿರ್ಮಿಸುವಲ್ಲಿ ಕಾರ್ಮೋನ್ಮುಖರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಸವರಾಜಪ್ಪ, ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಬದ್ನೂರ, ಎಲ್ಲ ವಸತಿ ನಿಲಯಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ: ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಆಶ್ರಯದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಗರದ ದೇವರಾಜ ಅರಸು ಸಭಾಭವನದಲ್ಲಿ ಜರುಗಿತು.
ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಜಗದೀಶ ಎಸ್. ಹೆಬ್ಬಳ್ಳಿ ಮಾತನಾಡಿ, ಮತದಾನ ಪ್ರತಿಯೊಬ್ಬ ವ್ಯಕ್ತಿಯ ಹಕ್ಕಾಗಿದೆ. ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಿದಾಗ ಉತ್ತಮ ಪ್ರಜಾಪ್ರಭುತ್ವ ಪಡೆಯಲು ಸಾಧ್ಯ ಎಂದು ಮತದಾನದ ಮಹತ್ವ ಹಾಗೂ ಜವಾಬ್ದಾರಿ ತಿಳಿಸಿದರು.
ಮತದಾನದ ಪ್ರತಿಜ್ಞಾ ವಿಧಿಯನ್ನು ಸಿದ್ದಪ್ಪನವರ ಅವರು ಬೋಧಿಸಿದರು. ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಬದ್ನೂರ, ಎಲ್ಲ ವಸತಿ ನಿಲಯಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

