ಹಾವೇರಿ

ದಾದಾಪೀರ ಬೂಸಿ ಪ್ರಚಾರ ಶುರು

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 8
ಬ್ಯಾಡಗಿ ವಿಧಾನಸಭೆ ಕ್ಷೇತ್ರದ ಬಿಎಸ್ಸಾರ್ ಸಂಭಾವ್ಯ ಅಭ್ಯರ್ಥಿ ದಾದಾಪೀರ ಬೂಸಿ ತಾಲೂಕಿನ ಗುಡ್ಡದ ಮಲ್ಲಾಪುರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ಬಳ್ಳಾರಿ ರೆಡ್ಡಿಗಳ ಸಹಕಾರದಿಂದ ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂತು. ಬಳಿಕ ಬಿಜೆಪಿ ಕುತಂತ್ರದಿಂದ ಜನಾರ್ದನ ರೆಡ್ಡಿ ಜೈಲು ಸೇರುವಂತಾಯಿತು ಎಂದರು.
ಅಧಿಕಾರಕ್ಕೆ ಜೋತು ಬೀಳದ ಸ್ವಾಭಿಮಾನಿ ಶ್ರೀರಾಮುಲು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಪ್ರಾದೇಶಿಕ ಪಕ್ಷ ರಚಿಸಿ ತನ್ಮೂಲಕ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ನಡೆಸುತ್ತಿರುವ ದುರಾಡಳಿತಕ್ಕೆ ಜನತೆ ಬೇಸತ್ತಿದ್ದಾರೆ ಎಂದರು.
ಹಲವು ವರ್ಷಗಳಿಂದ ಕ್ಷೇತ್ರದ ಜನರ ಸೇವೆಯಲ್ಲಿ ತೊಡಗಿದ್ದು, ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದೇನೆ. ಮತ ಬಾಂಧವರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ನನಗೆ ಪಕ್ಷದ ಎಲ್ಲ ಪದಾಧಿಕಾರಿಗಳ ಬೆಂಬಲವಿದೆ ಎಂದರು.
ಬಡವರು ಹಾಗೂ ಶ್ರಮಿಕ ಜೀವಿಗಳ ಹಿತ ಚಿಂತನೆ ನಡೆಸುತ್ತಿರುವ ರಾಮುಲು ಅವಿರತವಾಗಿ ಶ್ರಮಿಸುತ್ತಿದ್ದು, ರಾಜ್ಯದಲ್ಲಿ ಅವರಿಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ.
ಬಿಎಸ್‌ಆರ್ ಅಭ್ಯರ್ಥಿಯನ್ನೇ ಕ್ಷೇತ್ರದಿಂದ ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಅತ್ತಿಕಟ್ಟಿ, ಚಿಕ್ಕಬಾಸೂರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಪಕ್ಷ ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಎಸ್‌ಎಸ್ ಮಾಜಿ ಅಧ್ಯಕ್ಷ ನಾಗರಾಜ ಬೆಣ್ಣಿಗೇರಿ, ಮಲ್ಲಿಕಾರ್ಜುನ ಹಿತ್ತಲಮನಿ, ಚಂದ್ರಪ್ಪ ಕೊಪ್ಪದ, ಸಿದ್ದನಗೌಡ ಬಿದರಕಟ್ಟಿ, ಗದಿಗೆಪ್ಪ ಕೊಪ್ಪದ, ದೇವೇಂದ್ರಪ್ಪ ಬಡಿಗೇರ, ಸೋಮಣ್ಣ ಒಡೆಯನಪುರ, ರೇಖಾ ಬಂಡಿವಡ್ಡರ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.