ರುಕ್ಮಿಣಿ ಸಾಹುಕಾರ ರಾಜಿನಾಮೆ
ಹಾವೇರಿ: ರಾಣಿಬೆನ್ನೂರು ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಲು ಬಯಸಿದ್ದ ಪ್ರಬಲ ಆಕಾಂಕ್ಷಿ ಕೆಪಿಸಿಸಿ ಕಾರ್ಯದರ್ಶಿ ರುಕ್ಮಿಣಿ ಸಾವಕಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.
ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸದ ಎದುರು ರಾಣಿಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗದಿರುವ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಲು ನಿರ್ಧರಿಸಿರುವುದಾಗಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹತ್ತಿಕ್ಕುವ ಯತ್ನ: ರಾಜ್ಯ ನಾಯಕರು ಕಾಂಗ್ರೆಸ್ನಲ್ಲಿ ಮಹಿಳಾ ಕಾರ್ಯಕರ್ತರನ್ನು ಹತ್ತಿಕ್ಕುವ ವ್ಯವಸ್ಥಿತ ಸಂಚು ನಡೆಸುತ್ತಿದ್ದಾರೆ. 8 ಬಾರಿ ಈ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಬಿ. ಕೋಳಿವಾಡ ಅವರನ್ನೇ ಈ ಬಾರಿಯೂ ರಾಣಿಬೆನ್ನೂರಿನಿಂದ ಕಣಕ್ಕಿಳಿಸಲಾಗಿದೆ. ಪಕ್ಷದ ನಿಷ್ಠಾವಂತ ಹಾಗೂ ಗೆಲ್ಲುವ ಮಹಿಳಾ ಕಾರ್ಯಕರ್ತರನ್ನು ಕಣಕ್ಕಿಳಿಸಿದ್ದರೆ ಈ ಕ್ಷೇತ್ರ ಕಾಂಗ್ರೆಸ್ನ ಭದ್ರಕೋಟೆಯಾಗುತ್ತಿತ್ತು. ಉದ್ದೇಶಪೂರ್ವಕವಾಗಿಯೇ ರಾಜ್ಯ ನಾಯಕರು ಮಹಿಳೆಯರಿಗೆ ಟಿಕೆಟ್ ಸಿಗದಂತೆ ನೋಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ಹಿಡಿತ: ರಾಣಿಬೆನ್ನೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಅವಕಾಶ ತಮಗೆ ದೊರಕಲಿದೆ ಎಂದು ಹಗಲಿರುಳು ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದೇವು. 2008ರ ಚುನಾವಣೆಯಲ್ಲಿ ಹಾವೇರಿ ಲೋಕಸಭಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯೊಬ್ಬರಿಗೆ ಸ್ಪರ್ಧಿಸಲು ಅವಕಾಶ ನೀಡುವ ಉದ್ದೇಶದಿಂದ ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನೆಹರು ಓಲೇಕಾರ ವಿರುದ್ಧ ಶಾರದಾ ಬೆಂಡಿಗೇರಿ ಅವರನ್ನು ಕಾಂಗ್ರೆಸ್ನಿಂದ ಕಣಕ್ಕಿಳಿಸಲಾಗಿತ್ತು. ಆದರೆ, ಅವರು ಗೆಲ್ಲುವ ಅಭ್ಯರ್ಥಿಯಾಗಿರಲಿಲ್ಲ. ಚುನಾವಣೆಯಲ್ಲಿ ಅವರು ಕೇವಲ 1485 ಮತಗಳನ್ನು ಪಡೆದರು.
ಗೆಲ್ಲುವ ಅಭ್ಯರ್ಥಿಗೆ ಅವಕಾಶ ನೀಡಿದ್ದರೇ ಈ ಕ್ಷೇತ್ರ ಕೈಪಾಲಾಗುತ್ತಿತ್ತು. 2008ರ ಚುನಾವಣೆ ಫಲಿತಾಂಶವನ್ನೇ ರಾಜ್ಯ ನಾಯಕರು ಮುಂದಿಟ್ಟುಕೊಂಡು, ಮಹಿಳೆಯರಿಗೆ ಟಿಕೆಟ್ ನೀಡಿದರೆ ಗೆಲವು ಅಸಾಧ್ಯ ಎಂದು ಹೈಕಮಾಂಡ್ ಎದುರು ಬಿಂಬಿಸುವ ಮೂಲಕ ಈ ಬಾರಿ ತಮಗೆ ಸಿಗದಂತೆ ನೋಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಎಲ್ಲ ಕಾರಣಗಳಿಂದಾಗಿ ತಾವು ಕೆಪಿಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಇನ್ನೆರಡು ದಿನಗಳಲ್ಲಿ ರಾಜಿನಾಮೆ ಸಲ್ಲಿಸಲು ನಿರ್ಧರಿಸಿದ್ದಾಗಿಯೂ ತಿಳಿಸಿದರು. ಕೆಪಿಸಿಸಿ ಕಾನೂನು ಘಟಕದ ಉಪಾಧ್ಯಕ್ಷ ಸಂಜೀವ ಶಿರಹಟ್ಟಿ, ಅತಾವುಲ್ಲಾ ದೊಡ್ಡಳ್ಳಿ ಹಾಗೂ ಅಲ್ಪಸಂಖ್ಯಾತ ಘಟಕದ ಸದಸ್ಯ ಮೋಬಿಸಾಬ್ ಪತ್ರಿಕಾಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

