ನಾನಿಲ್ಲದಿದ್ದರೆ ಇವರೆಲ್ಲ ವಿಧಾನಸಭೆ ಮೆಟ್ಟಿಲೇರುವುದೂ ಕಷ್ಟವಾಗಿತ್ತು
ಬ್ಯಾಡಗಿ: ನನ್ನ ಸಹಕಾರ ಪಡೆದು ನಾಯಕರಾಗಿದ್ದಾರೆ, ಇಲ್ಲದಿದ್ದರೆ ವಿಧಾನಸೌಧ ಮೆಟ್ಟಿಲು ಹತ್ತುವುದೂ ಅವರಿಗೆ ಕಷ್ಟವಾಗಿತ್ತು ಎಂದು ಕೊನೆಗಳಿಗೆಯಲ್ಲಿ ಕೈಕೊಟ್ಟ ನಿಷ್ಠರ ವಿರುದ್ಧ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರಿಹಾಯ್ದರು.
ಶುಕ್ರವಾರ ಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆನ್ನಿಗೆ ಚೂರಿ ಹಾಕಿದವರನ್ನು ನಾನು ಕ್ಷಮಿಸಬಲ್ಲೆ. ಆದರೆ ನನಗಾದ ಅನ್ಯಾಯವನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಜತೆಗಿದ್ದವರಷ್ಟೇ ಆಪ್ತರು ಎಂದು ಭಾವಿಸಿದ್ದೇನೆ. ಚುನಾವಣೆ ಕಣದಲ್ಲಿ ಹೋರಾಟ ಅನಿವಾರ್ಯ. ಅಧಿಕಾರ ಎಂದಿಗೂ ಶಾಶ್ವತವಲ್ಲ. ರಾಜ್ಯದ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷ ಕಟ್ಟಿದ್ದೇನೆ ಹೊರತು, ವೈಯಕ್ತಿಕ ಹಿತಾಸಕ್ತಿ ಇಲ್ಲ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇನ್ನೆರಡು ದಿನಗಳಲ್ಲಿ ಶಿಗಾಂ್ಗವಿ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸುವೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಕೆಜೆಪಿ 4 ತಿಂಗಳು ಹಸುಗೂಸು. ರಾಜ್ಯದ 224 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ. ಒಂದೆರೆಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟದಲ್ಲಿದ್ದೇವೆ ಎಂಬುದೇ ದೊಡ್ಡ ಸುದ್ದಿಯಾಗುತ್ತಿದೆ. ಜನರ ತೀರ್ಮಾನವನ್ನು ತಾವೇ ನಿರ್ಧರಿಸಿದ ರೀತಿಯಲ್ಲಿ ಮಾಧ್ಯಮಗಳಲ್ಲಿ ಸಮೀಕ್ಷೆ ಪ್ರಕಟಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಹರಿಹಾಯ್ದರು.
ಶನಿವಾರ 4ನೇ ಪಟ್ಟಿ: ಕೆಜೆಪಿಯ 4ನೇ ಹಾಗೂ ಅಂತಿಮ ಪಟ್ಟಿಯನ್ನು ಶನಿವಾರ ಬೆಂಗಳೂರಿನಲ್ಲಿ ಪ್ರಕಟಿಸುವುದಾಗಿ ತಿಳಿಸಿದರು. 50 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲು ನಿರ್ಧರಿಸಿದ್ದೇನೆ ಎಂದರು.
ಆಪ್ತರಿರಲಿ, ವಿರೋಧಿಗಳಿರಲಿ, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಸಮರ ಸಾರಿದ್ದೇನೆ. ಬೊಮ್ಮಾಯಿ, ನಿರಾಣಿ ಹಾಗೂ ಕತ್ತಿ ವಿರುದ್ಧ ಕಣಕ್ಕಿಳಿಯುವ ಅಭ್ಯರ್ಥಿಗಳ ಹೆಸರೂ ಶನಿವಾರ ಅಂತಿಮಗೊಳ್ಳಲಿದೆ ಎಂದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

