ಹಾವೇರಿ

ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ

Published On :

ಹಾನಗಲ್ಲ: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸರಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತಪ್ಪ ಮರಡಿ ಕರೆ ನೀಡಿದರು.
ತಾಲೂಕಿನ ಅಜಗುಂಡಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಚಿತ ಬಿಸಿಯೂಟ, ಪಠ್ಯಪುಸ್ತಕ ಬಳಸಿಕೊಂಡು ತಮ್ಮ ಫಲಿತಾಂಶ ಹೆಚ್ಚಿಸಿಕೊಳ್ಳಬೇಕು ಎಂದರು.
ಶಿಕ್ಷಣ ಸಂಯೋಜಕ ಯು.ಬಿ. ದೊಡ್ಡಮನಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿ, ದೇಶಭಕ್ತಿ, ಪ್ರಾಮಾಣಿಕತೆ ಕುರಿತಾದ ಮೌಲ್ಯಗಳನ್ನು ಶಿಕ್ಷಕರು ಬಿತ್ತಬೇಕು. ನಲಿ-ಕಲಿ, ಕಲಿ-ನಲಿ, ಪಾಠೋಪಕರಣಗಳನ್ನು ಬಳಸಿ ಮಕ್ಕಳಲ್ಲಿ ಆಸಕ್ತಿ ಹುಟ್ಟಿಸಬೇಕು. ಒಟ್ಟಾರೆ ಶಾಲೆ ಬಿಡದಂತೆ ಮಕ್ಕಳ-ಶಾಲೆಯ ನಡುವಿನ ಸಂಬಂಧ ಹೆಚ್ಚಿಸಲು ಹೊಸ, ಹೊಸ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದರು.
ನೋಡಲ್ ಅಧಿಕಾರಿ ಉಮೇಶ ಅಂಗಡಿ ಮಾತನಾಡಿ, ಶಾಲೆಯಲ್ಲಿ ಶಿಕ್ಷಕರು ಆಸಕ್ತಿಯಿಂದ ಪಾಠ ಮಾಡಲು ಉತ್ತಮ ವಾತಾವರಣ ನಿರ್ಮಿಸುವಲ್ಲಿ ಗ್ರಾಮಸ್ಥರು ಕಾಳಜಿ ವಹಿಸಬೇಕು. ಎಸ್‌ಡಿ ಎಂಸಿ ಪದಾಧಿಕಾರಿಗಳ ಸಹಕಾರ, ದಾನಿಗಳ ಕೊಡುಗೆ, ಪಾಲಕರ ಆಸಕ್ತಿಯೂ ಸೇರಿದರೆ ಇದು ತಾಲೂಕಿನಲ್ಲಿಯೇ ಮಾದರಿ ಶಾಲೆಯಾಗಲು ಸಾಧ್ಯವಿದೆ ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರಗತಿ ಪತ್ರಿಕೆ, ಉತ್ತರ ಪತ್ರಿಕೆ, ಅಭಿವೃದ್ಧಿ ಪರಿಶೀಲನೆ ನಡೆಸಿದರು. ಶಾಲೆಯ ಮಾರ್ಗದರ್ಶಕ ಗುರುಸಿದ್ದಪ್ಪ ಹಡಪದ ಉಪಸ್ಥಿತರಿದ್ದರು. ಪ್ರಧಾನ ಗುರುಮಾತೆ ವನಜಾಕ್ಷಮ್ಮ ಸ್ವಾಗತಿಸಿದರು. ಶಿಕ್ಷಕ ಸುಭಾಸ ಹೊಸಮನಿ ಕಾರ್ಯಕ್ರಮ ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.