ಹಾವೇರಿ

ಸೋಲಿನ ಭೀತಿ: ದೂರು ದಾಖಲು

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಏ. 13
ಚುನಾವಣೆಯಲ್ಲಿ ಸೋಲುತ್ತೇನೆ ಎಂಬ ಭಯದಿಂದ ಕಾಂಗ್ರೆಸ್ ಅಭ್ಯರ್ಥಿ ರುದ್ರಪ್ಪ ಲಮಾಣಿ, ಕರ್ಜಗಿ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ ಎಂದು ಹಾವೇರಿ ವಿಧಾನಸಭಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ನೆಹರು ಓಲೇಕಾರ ದೂರಿದ್ದಾರೆ.
ತಾವು ಶಾಸಕರಾಗಿದ್ದ 5 ವರ್ಷದ ಅವಧಿಯಲ್ಲಿ ಒಂದಾದರೂ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದರೆ ಕಾಂಗ್ರೆಸ್ಸಿಗರು ತೋರಿಸಲಿ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಓಲೇಕಾರ ಸವಾಲು ಹಾಕಿದರು.
ಕ್ಷೇತ್ರದಾದ್ಯಂತ ತಮ್ಮ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಗೆ ವ್ಯಾಪಕ ಜನಮನ್ನಣೆ ದೊರೆಯುತ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತಿತರ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಕೆಜೆಪಿ ಸೇರುತ್ತಿದ್ದಾರೆ. ಇದು ಕಾಂಗ್ರೆಸ್ಸಿಗರಲ್ಲಿ ಭಯ ಮೂಡಿಸಿದೆ ಎಂದರು.
ಕ್ರಮಕ್ಕೆ ಒತ್ತಾಯ: ನಾಗೇಂದ್ರಮಟ್ಟಿ ಹಾಗೂ ಎಂಜಿ ರಸ್ತೆಯಲ್ಲಿ ಕೆಜೆಪಿ ಪರ ಪ್ರಚಾರ ಕಾರ್ಯ ನಡೆಸುತ್ತಿದ್ದ ಅನಿತಾ ಸುಬ್ರಮಣ್ಯ ಅವರನ್ನು ಕಾಂಗ್ರೆಸ್ ನಗರಸಭಾ ಸದಸ್ಯ ಮಲೇಶಪ್ಪ ಪಟ್ಟಣಶೆಟ್ಟಿ ಹಾಗೂ ಯು.ಐ. ಪಠಾಣ, ಅನಿತಾ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಆದ್ದರಿಂದ ತಕ್ಷಣ ಅವರುಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಓಲೇಕಾರ ಒತ್ತಾಯಿಸಿದರು.
ಭೂ ಕಬಳಿಕೆ ಆರೋಪ: ಕಾಂಗ್ರೆಸ್ ಮುಖಂಡ ಎಂ.ಎಂ. ಹಿರೇಮಠ, ಜಿಪಂ ಸದಸ್ಯರಾಗಿದ್ದ ಸಂದರ್ಭ ಕಳ್ಳಿಹಾಳದಿಂದ ಅಗಡಿಗೆ ಹೋಗುವ ರಸ್ತೆಯಲ್ಲಿ ಭೂ ಕಬಳಿಕೆ ಮಾಡಿದ್ದರು. ಇದನ್ನು ತಾವು ತೆರವುಗೊಳಿಸಿದ್ದಕ್ಕೆ ತಮ್ಮ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆಂದು ಓಲೇಕಾರ ದೂರಿದರು.ಏ. 17ರಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದು ಎಂದೂ ಓಲೇಕಾರ ಈ ಸಂದರ್ಭದಲ್ಲಿ ತಿಳಿಸಿದರು. ಸುರೇಶ ಹೊಸಮನಿ, ನಾಗರಾಜ ಬಸೇಗೆಣ್ಣಿ ಪತ್ರಿಕಾಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.