ಅಭಿವೃದ್ಧಿ ಕಾರ್ಯಗಳೇ ಬಿಜೆಪಿಗೆ ಶ್ರೀರಕ್ಷೆ
ಕನ್ನಡಪ್ರಭ ವಾರ್ತೆ, ಹಾನಗಲ್ಲ, ಏ. 14
ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಚುನಾವಣೆಗೆ ಶ್ರೀರಕ್ಷೆಯಾಗಲಿದ್ದು, ಹಾನಗಲ್ಲ ವಿಧಾನಸಭೆ ಕ್ಷೇತ್ರದ ಮತದಾರರ ಬಹುಕಾಲದ ನಿರೀಕ್ಷೆಯಂತೆ ಈ ಬಾರಿ ಹೊಸ ಅಭ್ಯರ್ಥಿ ಆಯ್ಕೆ ಖಚಿತ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮಾಜಿ ಅಧ್ಯಕ್ಷ ರವಿಕುಮಾರ ಬೆಲ್ಲದ ವಿಶ್ವಾಸ ವ್ಯಕ್ತಪಡಿಸಿದರು.
ಹಾನಗಲ್ಲಿನ ಗಂಗಾನಗರ ಪ್ರದೇಶದ ಕರೂದಿ ಅವರ ಕಟ್ಟಡದಲ್ಲಿ ಹಾನಗಲ್ಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಚುನಾವಣೆ ಪ್ರಚಾರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಅಭಿವೃದ್ಧಿ ಯೋಜನೆಗಳು ಮತದಾರ ಅರಿತುಕೊಂಡಿದ್ದಾನೆ. ಪ್ರಸಕ್ತ ಚುನಾವಣೆಯಲ್ಲಿ ಹಾನಗಲ್ಲ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂದರು.
ಪಕ್ಷದ ತಾಲೂಕಾಧ್ಯಕ್ಷ ಜಿ.ಬಿ. ಗುಡ್ಡಪ್ಪನವರ ಕಚೇರಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಭೋಜರಾಜ ಕರೂದಿ, ಜಿಲ್ಲಾ ಘಟಕದ ಉಪಾಧ್ಯಕ್ಷ ಈರಣ್ಣ ನಿಂಬಣ್ಣನವರ, ಜಿಪಂ ಸದಸ್ಯ ಬಸವರಾಜ ಹಾದಿಮನಿ, ಮುಖಂಡರಾದ ಗಣೇಶಪ್ಪ ಕೋಡಿಹಳ್ಳಿ, ಅನಂತವಿಕಾಸ ನಿಂಗೋಜಿ, ಬಿ.ಎಸ್. ಕುಲಕರ್ಣಿ, ವಿ.ಜಿ. ಶಾಂತಪುರಮಠ, ಜಿ.ಬಿ. ಕೊಂಡೋಜಿ, ಸತೀಶ ಕುರುಬರ, ರವಿ ದೇಶಪಾಂಡೆ, ಭರಮಣ್ಣ ಶಿರಶಿ, ರಾಮಣ್ಣ ದೊಡ್ಡಮನಿ, ಸಿದ್ಧರಾಮಪ್ಪ ಹಾದಿಮನಿ, ಪ್ರಕಾಶ ಗೋದಿ, ಮಾರುತಿ ಈಳಿಗೇರ, ಬಸವರಾಜ ಶೀಲವಂತ, ಸಂಜಯ ಬೇದ್ರೆ, ಅಶೋಕ ಈಳಿಗೇರ, ಇತರರು ಉಪಸ್ಥಿತರಿದ್ದರು.
ಪಕ್ಷದ ನೂತನ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.
17ರಂದು ನಾಮಪತ್ರ ಸಲ್ಲಿಕೆ: ಏ. 17ರಂದು ಬಿಜೆಪಿ ಅಭ್ಯರ್ಥಿಯಿಂದ ಹಾನಗಲ್ಲ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲಾಗುತ್ತಿದೆ. ಬೆಳಗ್ಗೆ 9ಕ್ಕೆ ಸ್ಥಳೀಯ ಎಪಿಎಂಸಿಯಿಂದ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಸೇರಿ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಈ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು ಎಂದು ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಅನಂತವಿಕಾಸ ನಿಂಗೋಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

