ಕಾಂಗ್ರೆಸ್ ಭಿನ್ನಮತ ಬಹಿರಂಗ: ಬಳ್ಳಾರಿ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 14
ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದರು ಎನ್ನುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಸಿಎಂ ಪಟ್ಟಕ್ಕೆ ಕಿತ್ತಾಟ ಆರಂಭಿಸಿದ್ದಾರೆ. ಕಾಂಗ್ರೆಸ್ ಆಂತರಿಕ ಭಿನ್ನಮತದಿಂದ ಚುನಾವಣಾ ಪೂರ್ವ ಸಮೀಕ್ಷೆಗಳು ಸುಳ್ಳಾಗಲಿವೆ ಎಂದು ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ಭವಿಷ್ಯ ನುಡಿದರು.
ಕ್ಷೇತ್ರದ ಸುಣಕಲ್ಲ ಬಿದರಿಯಲ್ಲಿ ಪಾದಯಾತ್ರೆ ಮೂಲಕ ಮತ ಯಾಚಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಬೀಗುತ್ತಿರುವ ಕಾಂಗ್ರೆಸ್ ಚುನಾವಣೆಯಲ್ಲಿ ನೆಲ ಕಚ್ಚಲಿದೆ. ರಾಜ್ಯದ ಬಹಳಷ್ಟು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧೆಗಿಳಿದಿದ್ದಾರೆ. ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಬಹಿರಂಗವಾಗಿದೆ ಎಂದು ತಿಳಿಸಿದರು.
ಹಲವಾರು ವರ್ಷಗಳಿಂದ ಮೀಸಲು ಕ್ಷೇತ್ರವಾಗಿದ್ದ ಬ್ಯಾಡಗಿಯಲ್ಲಿ ಹೊರಗಿನವರೇ ಶಾಸಕರಾಗಿ ಆಯ್ಕೆಯಾಗಿದದಾರೆ. ಹೀಗಾಗಿ, ಕ್ಷೇತ್ರ ಅಭಿವೃದ್ಧಿ ಕಂಡಿಲ್ಲ. ಇಂದಿಗೂ ನೀರಾವರಿ, ಶಿಕ್ಷಣ, ಆರೋಗ್ಯ ಮುಂತಾದ ಸೌಲಭ್ಯಗಳಿಂದ ವಂಚಿತವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಿ, ರಾಜ್ಯದಲ್ಲೇ ಬ್ಯಾಡಗಿಯನ್ನು ಮಾದರಿ ಕ್ಷೇತ್ರವಾಗಿಸುವ ಗುರಿ ಹೊಂದಿರುವ ತಮ್ಮನ್ನು ಆಶೀರ್ವದಿಸಬೇಕು ಎಂದರು.
ಬೇಸಿಗೆಯಲ್ಲಿ ಕುಡಿಯುವ ನೀರಿಲ್ಲದೆ ಪರದಾಡುತ್ತಿರುವ ಜನತೆಗೆ ಶಾಶ್ವತ ನೀರು ಒದಗಿಸುವುದು ಹಾಗೂ ಕ್ಷೇತ್ರದಲ್ಲಿ ಎಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳನ್ನು ತಂದು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವುದೇ ನನ್ನ ಮುಖ್ಯ ಗುರಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ಈ ಜನಪರ ಕಾರ್ಯಕ್ರಮಗಳೇ ನನ್ನ ಗೆಲವಿಗೆ ಶ್ರೀರಕ್ಷೆಯಾಗಲಿವೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ, ರಾಮಚಂದ್ರಪ್ಪ ಉಕ್ಕುಂದ, ಮುಖಂಡ ಜಯಣ್ಣ ಮಲ್ಲಿಗಾರ, ಶಂಕರಗೌಡ ಪಾಟೀಲ, ಶಂಕ್ರಣ್ಣ ಅಕ್ಕಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

