ಡಾ. ಅಂಬೇಡ್ಕರ ಆದರ್ಶ ಪ್ರಸ್ತುತ: ಬೊಮ್ಮಾಯಿ
ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಏ. 14
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ ಬಿ.ಆರ್. ಅಂಬೇಡ್ಕರರ ಆದರ್ಶ ಹಾಗೂ ಆಚಾರ-ವಿಚಾರಗಳು ಎಂದೆಂದಿಗೂ ಪ್ರಸ್ತುತವಾಗಿವೆ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಪಟ್ಟಣದ ಅಂಬೇಡ್ಕರ್ ಸಭಾ ಭವನದಲ್ಲಿ ನಡೆದ ಡಾ ಬಿ.ಆರ್. ಅಂಬೇಡ್ಕರರ 122ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಾಡು-ನುಡಿಯ ಉಳಿವು ಹಾಗೂ ಅಭಿವೃದ್ಧಿಗಾಗಿ ಅನೇಕ ಮಹನೀಯರು ಶ್ರಮಿಸಿದ್ದಾರೆ. ಇಂತಹ ಮಹನೀಯರಲ್ಲಿ ಡಾ ಅಂಬೇಡ್ಕರ್ ಒಬ್ಬರಾಗಿದ್ದಾರೆ ಎಂದ ಬೊಮ್ಮಾಯಿ, ದೇಶದ ಸರ್ವ ಜನಾಂಗದವರ ಏಳ್ಗೆ ಹಾಗೂ ಸಮಾನತೆ ಆಧಾರದ ಮೇಲೆ ಸಂವಿಧಾನವನ್ನು ರಚಿಸುವ ಮೂಲಕ ಪ್ರತಿಯೊಬ್ಬ ನಾಗರಿಕರು ನೆಮ್ಮದಿಯ ಬದುಕು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
ಹಿಂದುಳಿದ ಜನರ ಬದುಕು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಇದನ್ನು ದೂರು ಮಾಡಲು ಶಿಕ್ಷಣ ಹಾಗೂ ಸಮಾನತೆ ಅತ್ಯಂತ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ತಾಲೂಕು ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಪುರಸಭೆ ಮಾಜಿ ಸದಸ್ಯ ಮಾಲತೇಶ ಯಲಿಗಾರ, ಆನಂದ ದಾನಿ, ದಲಿತ ಸಮಾಜದ ಮುಖಂಡ ಕರೆಪ್ಪ ಕಟ್ಟಿಮನಿ, ಪುರಸಭೆ ಸದಸ್ಯ ಶಂಕ್ರವ್ವ ಅಂದಲಗಿ, ಲಕ್ಷ್ಮಿ ಕಟ್ಟಿಮನಿ, ಫಕ್ಕೀರೇಶ ಶಿಗ್ಗಾಂವಿ, ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

